ನವದೆಹಲಿ : ಆಪರೇಷನ್ ಸಿಂಧೂರ ಕಾರ್ಯಾಚರಣೆ ಆರಂಭಗೊಂಡ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರವನ್ನು ಯಶಸ್ವಿಯಾಗಿಸಿದ ಭಾರತೀಯ ಯೋಧರಿಗೆ ಮೋದಿ ವಂದನೆಗಳನ್ನು ಸಲ್ಲಿಸಿದ್ದಾರೆ.
ನಂತರ, ಮೋದಿ ಭಯೋತ್ಪಾದಕರ ವಿರುದ್ಧ ಕಿಡಿ ಕಾರಿದ್ದಾರೆ. ಭಾರತೀಯ ಮಹಿಳೆಯರ ಸಿಂಧೂರ ಅಳಿಸಿದರೆ ಏನಾಗುತ್ತೆ ಎಂದು ನಮ್ಮ ವೈರಿಗಳಿಗೆ ಗೊತ್ತಾಗಿದೆ. ಸಿಂಧೂರ ಎನ್ನುವುದು ಸಾಮಾನ್ಯದ ಸಂಗತಿ ಅಲ್ಲ. ಆಪರೇಷನ್ ಸಿಂಧೂರ ನ್ಯಾಯದ ಅಖಂಡ ಪ್ರತಿಜ್ಞೆ ಆಗಿದೆ. ವೈರಿಗಳು ಆಪರೇಷನ್ ಸಿಂಧೂರ ಇಷ್ಟು ಕಟುವಾಗಿರುತ್ತದೆ ಎಂದು ಎಣಿಸಿರಲಿಲ್ಲ. ನಮ್ಮ ಸೇನಾಪಡೆಗಳು ಉಗ್ರರ ಶಿಬಿರಗಳ ಮೇಲೆ ನಿಖರ ದಾಳಿ ನಡೆಸಿವೆ. ದೇಶ ಒಗ್ಗಟ್ಟಾಗಿದ್ದಾಗ ಇಂತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬಹುದು ಎಂದಿದ್ದಾರೆ.
ಭಾರತ ಯಾವುದೇ ರೀತಿಯ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ. ಭಾರತದ ಸರ್ಜಿಕಲ್ ದಾಳಿಗಳು ಪಾಕಿಸ್ತಾನದ ಯುದ್ಧ ಸಿದ್ಧತೆಗಳನ್ನು ಛಿದ್ರಗೊಳಿಸಿವೆ. ಪಾಕಿಸ್ತಾನ ಯುದ್ಧಕ್ಕೆ ಸಿದ್ಧವಾಯಿತು. ಆದರೆ ಬಹಾವಲ್ಪುರ್ ಮತ್ತು ಮುರಿಡ್ಕೆಯಲ್ಲಿನ ಭಯೋತ್ಪಾದಕ ಕೇಂದ್ರಗಳನ್ನು ನಾಶಮಾಡುವ ಮೂಲಕ ಭಾರತ ಅವರಿಗೆ ಆಘಾತ ನೀಡಿತು. ನಾವು ಮೊದಲು ಅಣ್ವಸ್ತ್ರ ಬಳಕೆ ಮಾಡುವುದಿಲ್ಲ. ಆದರೆ ನಮ್ಮ ಮೇಲೆ ದಾಳಿ ನಡೆಸಿದರೆ ನಾವು ಅಣ್ವಸ್ತ್ರ ಬಳಕೆಗೆ ಹಿಂಜರಿಯಲ್ಲ ಎಂದು ಮೋದಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ : ಜಮೀನು ವಿವಾದ – ತಮ್ಮನ ಹೆಂಡತಿ, ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪಾಪಿ ಅಣ್ಣ!
