ಶಿವಮೊಗ್ಗ : ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಧು ಬಂಗಾರಪ್ಪ ಅವರು ನಿನ್ನೆ ವಿಶ್ವ ಪ್ರಸಿದ್ಧ ಜೋಗ ಜಲಪಾತಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಕಾಮಗಾರಿಗಳ ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ.
ಜೋಗ ಜಲಪಾತಕ್ಕೆ ಭೇಟಿ ನೀಡಿದ ಮಧು ಬಂಗಾರಪ್ಪನವರು, ಅಲ್ಲಿನ ಮುಖ್ಯದ್ವಾರದ ಕಾಮಗಾರಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಸಮಗ್ರ ಅಭಿವೃದ್ದಿ ಕಾಮಗಾರಿಗಳ ಸ್ಥಳ ಪರಿಶೀಲಿಸಿ ಅಗತ್ಯ ಸಲಹೆಗಳನ್ನು ನೀಡಿದ್ದಾರೆ.
ಜೋಗ ಜಲಪಾತಕ್ಕೆ ಮಳೆಗಾಲ ಆರಂಭವಾಗುತ್ತಿದ್ದಂತೆ ಪ್ರವಾಸಿಗರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಮೂಲಭೂತ ಸೌಕರ್ಯಗಳ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮತ್ತು ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆ ಬಳಿಕ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ನೀಡಿದ್ದಾರೆ. ಈ ವೇಳೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬೇಳೂರು, ಜಿಲ್ಲಾಧಿಕಾರಿ ಶ್ರೀ ಗುರುದತ್ತ ಹೆಗಡೆ, ಸಾಗರ ಉಪವಿಭಾಗಾಧಿಕಾರಿ ಶ್ರೀ ವೀರೇಶ್ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಬೆಂಗಳೂರು : ಪಹಲ್ಗಾಮ್ನಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಬ್ಯಾನರ್ ಹಾಕಿದ್ದವರ ವಿರುದ್ದ FIR!
