ಬೆಂಗಳೂರು : ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣದಡಿ ದಾಖಲಾಗಿರುವ ದೂರು ಮತ್ತು ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಕಾಲೇಜು ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡಿಗರ ಭಾವನೆಗೆ ತಕ್ಕೆ ತಂದಿದ್ದ ಸೋನು ನಿಗಮ್ ವಿರುದ್ಧ ಕನ್ನಡ ಪರ ಸಂಘಟನೆ ದೂರು ದಾಖಲಿಸಿದ್ದವು. ಈ ದೂರಿನ ಮೇಲೆ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ವಿಚಾರಣೆ ಹಾಜರಾಗಲು ಸೋನು ನಿಗಮ್ಗೆ ನೋಟಿಸ್ ಜಾರಿಗೊಳಿಸಿದ್ದರು.
ಹೀಗಾಗಿ ತನ್ನ ವಿರುದ್ಧ ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಸೋನು ನಿಗಮ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ನಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ರಜಾಕಾಲೀನ ಏಕಸದಸ್ಯ ಪೀಠದ ಮುಂದೆ ಇಂದು ವಿಚಾರಣೆಗೆ ನಿಗದಿಯಾಗಿದೆ.
ಇದನ್ನೂ ಓದಿ : ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿ ಅಪಮಾನ – ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಕೃಷ್ಣಪ್ಪ ವಿರುದ್ದ ಸುಮೋಟೋ ಕೇಸ್ ದಾಖಲು!

Author: Btv Kannada
Post Views: 192