ದೇಶದ ರಕ್ಷಣಾ ನಿಧಿಗೆ ಮಂತ್ರಾಲಯ ಮಠದಿಂದ 25 ಲಕ್ಷ ರೂ. ದೇಣಿಗೆ!

ರಾಯಚೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ದೇಶದ ರಕ್ಷಣಾ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆಯನ್ನು ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಘೋಷಿಸಿದ್ದಾರೆ.

ಈ ಘೋಷಣೆಯನ್ನು ಶ್ರೀಗಳು ತಮ್ಮ 13ನೇ ಪಟ್ಟಾಭಿಷೇಕ ಮಹೋತ್ಸವದ ವೇಳೆ ಮಾಡಿದ್ದಾರೆ. ಭಕ್ತರಿಂದ ತುಲಾಭಾರ ಕಾರ್ಯಕ್ರಮ ನಡೆದ ಬಳಿಕ ಶ್ರೀಗಳು ಮಾತನಾಡಿದ್ದು, “ದೇಶದಲ್ಲಿ ಅಶಾಂತಿ ಉಂಟಾಗಿದೆ. ತಾತ್ಕಾಲಿಕವಾಗಿ ಯುದ್ಧ ವಿರಾಮ ದೊರಕಿದೆ. ರಾತ್ರಿ ಹಗಲು, ಮಳೆ, ಬಿಸಿಲು ಎನ್ನದೇ ಪ್ರಾಣವನ್ನೂ ಲೆಕ್ಕಿಸದೇ ದೇಶದ ರಕ್ಷಣೆಗಾಗಿ ನಮ್ಮೆಲ್ಲ ಯೋಧರು ಶ್ರಮಿಸುತ್ತಿದ್ದಾರೆ.

ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ದೇಶದ ಸೈನಿಕರ ಹಾಗೂ ನಾಗರಿಕರ ರಕ್ಷಣೆ, ಸುರಕ್ಷತೆಗಾಗಿ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿವಿಧ ವಿಶೇಷ ಪೂಜೆ, ಹೋಮ-ಹವನವನ್ನು ಸಹ ಈ ವೇಳೆ ನೆರವೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕನ್ನಡ ಮತ್ತು ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ – FIR ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಸೋನು ನಿಗಮ್!

Btv Kannada
Author: Btv Kannada

Read More