ಕನ್ನಡ ಮತ್ತು ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಕೇಸ್​ – FIR ರದ್ದು ಕೋರಿ ಸೋನು ನಿಗಮ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ!

ಬೆಂಗಳೂರು : ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ದಾಖಲಾಗಿದ್ದ FIR ರದ್ದು ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಲಾಗಿದೆ.

ಬೆಂಗಳೂರಿನ ಕಾಲೇಜು ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡಿಗರ ಭಾವನೆಗೆ ತಕ್ಕೆ ತಂದಿದ್ದ ಸೋನು ನಿಗಮ್ ವಿರುದ್ಧ ಕನ್ನಡ ಪರ ಸಂಘಟನೆ ದೂರು ದಾಖಲಿಸಿದ್ದವು. ಈ ದೂರಿನ ಮೇಲೆ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ವಿಚಾರಣೆ ಹಾಜರಾಗಲು ಸೋನು ನಿಗಮ್​ಗೆ ನೋಟಿಸ್ ಜಾರಿಗೊಳಿಸಿದ್ದರು‌.

ಹೀಗಾಗಿ ತನ್ನ ವಿರುದ್ಧ ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಸೋನು ನಿಗಮ್‌ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನಾಯಮೂರ್ತಿ ಶಿವಶಂಕರ್‌ ಅಮರಣ್ಣವರ್‌ ಅವರ ರಜಾಕಾಲದ ಪೀಠದಲ್ಲಿ ಇಂದು ವಿಚಾರಣೆ ನಡೆಸಲಾಯಿತು. ಈ ವೇಳೆ ವಾದ ಪ್ರತಿವಾದ ಆಲಿಸಿದ ನಾಯಮೂರ್ತಿ ಶಿವಶಂಕರ್‌ ಅಮರಣ್ಣವರ್‌ ಮೇ 15ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶಿಸಿದ್ದಾರೆ.

ಇದನ್ನೂ ಓದಿ : ದೇಶದ ರಕ್ಷಣಾ ನಿಧಿಗೆ ಮಂತ್ರಾಲಯ ಮಠದಿಂದ 25 ಲಕ್ಷ ರೂ. ದೇಣಿಗೆ!

 

Btv Kannada
Author: Btv Kannada

Read More