ಬೆಂಗಳೂರು : ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿ ಅಪಮಾನ ಮಾಡಿದ ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಕೃಷ್ಣಪ್ಪ ವಿರುದ್ದ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು, ಈ ಎಫ್ಐಆರ್ ರದ್ದು ಕೋರಿ ಎ. ಕೃಷ್ಣಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ಇಂದು ಕೋರ್ಟ್ ಅರ್ಜಿ ವಿಚಾರಣೆ ನಡೆಸಿದೆ. ಕೃಷ್ಣಪ್ಪ ಪರ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು ‘ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವ ಉದ್ದೇಶವಿರಲಿಲ್ಲವೆಂದು’ ವಾದ ಮಂಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಕೃಷ್ಣಪ್ಪ ವಿರುದ್ಧ ಆರೋಪಪಟ್ಟಿ ದಾಖಲಿಸದಂತೆ ತಡೆ ನೀಡಿ ಆದೇಶಿಸಿದ್ದಾರೆ.
ಏನಿದು ಪ್ರಕರಣ ? ಮೇ 8ರಂದು ಜಯನಗರ 9ನೇ ಬ್ಲಾಕ್ನಲ್ಲಿರುವ ಬಲಮುರಿ ವಿನಾಯಕ ಸುಬ್ರಹ್ಮಣ್ಯ ದೇವಾಲಯದ ಬಳಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ ರಾಮಮೂರ್ತಿ ಮತ್ತು ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಿಹಿ ಹಂಚುವ ಕಾರ್ಯಕ್ರಮ ಆಯೋಜಿಸಿದ್ದರು. ಈ ಸಂದರ್ಭ ಸಿಹಿ ಹಂಚುವಾಗ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿಯವರ ಪಕ್ಕದಲ್ಲಿದ್ದ ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಕೃಷ್ಣಪ್ಪ ರಾಷ್ಟ್ರಧ್ವಜವನ್ನು ಕರಾವಸ್ತ್ರದಂತೆ ಬಳಸಿಕೊಂಡು ಕೈ ಒರೆಸಿಕೊಂಡಿದ್ದಾರೆ. ಇದು ಸಾರ್ವಕನಿಕ ವಲುದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ : ಒಂದೂವರೆ ವರ್ಷದಿಂದ ಅಪ್ಡೇಟೇ ಆಗಿಲ್ಲ ಬಿಡಿಎ ವೆಬ್ಸೈಟ್ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರಲ್ಲಿ ಗೊಂದಲ!
