ಬೆಂಗಳೂರು : ಬಿರು ಬೇಸಿಗೆಯಲ್ಲೂ ಕೂಡ ರಾಜ್ಯಾದ್ಯಂತ ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ನಿನ್ನೆಯಿಂದ ಬಿಟ್ಟು ಬಿಡದೆ ಗಾಳಿ-ಮಳೆಯ ಅಬ್ಬರ ಜೋರಾಗಿದ್ದು, ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ನಿನ್ನೆ ಸಂಜೆ ನಗರದ ಅನೇಕ ಪ್ರದೇಶಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಸುರಿದ ಧಾರಾಕಾರ ಮಳೆಗೆ ರಸ್ತೆಗಳೆಲ್ಲಾ ಕಾಲುವೆಯಂತಾಗಿದ್ದು, ನಗರದ ವಿವಿಧೆಡೆ ಮರಗಳ ಕೊಂಬೆ ಉರುಳಿ ಬಿದ್ದು ಹಲವು ಅವಾಂತರಗಳು ಸೃಷ್ಟಿಯಾಗಿದೆ.
ಅದರಂತೆ ಇಂದೂ ಕೂಡ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವರುಣ ಅಬ್ಬರಿಸಲಿದ್ದಾನೆ. ಹಾಗೆಯೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ, ಆಲಿಕಲ್ಲು ಸಹಿತ ಮಳೆ ಸುರಿಯುವ ಮುನ್ಸೂಚನೆ ನೀಡಿದೆ.
ಬೀದರ್‌ನಿಂದ ಹಿಡಿದು ಚಾಮರಾಜನಗರದವರೆಗೆ ಮಳೆ ಅಲರ್ಟ್ ಘೊಷಣೆಯಾಗಿದೆ. ಮಂಗಳೂರಿನಿಂದ ಕೋಲಾರದ ವರೆಗಿನ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದೆ ಎಂದು ತಿಳಿಸಿದೆ. ಬೆಂಗಳೂರಿನಲ್ಲಿ ನಿನ್ನೆ ಬೆಳಗ್ಗೆಯಿಂದಲೂ ಬಿರು ಬಿಸಿಲಿನಿಂದ ಜನ ತತ್ತರಿಸಿ ಹೋಗಿದ್ದರು. ಆದ್ರೆ ಸಂಜೆ ಆಗ್ತಿದಂತೆ ಭೀಕರ ಮಳೆ ಆರಂಭವಾಗಿದೆ. ಅದೇ ರೀತಿ ಇಂದು ಕೂಡ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : ಕಾಶ್ಮೀರ ವಿಷಯದಲ್ಲಿ ಯಾರ ಮಧ್ಯಸ್ಥಿಕೆಯೂ ಬೇಕಿಲ್ಲ – ಟ್ರಂಪ್ಗೆ ಭಾರತ ಸ್ಪಷ್ಟ ಸಂದೇಶ!
