ಹೊಸದಿಲ್ಲಿ : ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ನೂತನ ಸಿಜೆಐಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿ ಇನ್ನು ಹಲವು ಗಣ್ಯರು ಭಾಗವಹಿಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರಿಗೆ ಶುಭಕೋರಿದ್ದಾರೆ.
ಮೇ 24, 2019ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಗವಾಯಿ ಅವರು, ಇನ್ನೂ ಆರು ತಿಂಗಳಿಗಿಂತ ಹೆಚ್ಚು ಅವಧಿಯ ಅಧಿಕಾರಾವಧಿ ಹೊಂದಿ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರು ಇಂದು ಹಿಂದಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ : ಬೆಂಗಳೂರಲ್ಲಿ ‘ಆಪರೇಷನ್ ಸಿಂಧೂರ’ ವಿಜಯೋತ್ಸವದ ವೇಳೆ ಪಾಕ್ ಪರ ಘೋಷಣೆ – ಛತ್ತೀಸ್ಗಢ ಮೂಲದ ಟೆಕ್ಕಿ ಬಂಧನ!

Author: Btv Kannada
Post Views: 529