ಮೈಸೂರು : KSRTC ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಮಂಚನಹಳ್ಳಿಯಲ್ಲಿ ನಡೆದಿದೆ.
34 ವರ್ಷದ ಸುನೀಲ್ ಮೃತ ದುರ್ದೈವಿ. ರಮೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಮೂಲತಃ ಚಿಕ್ಕಮಗಳೂರಿನ ಮೂಡಿಗೆರೆ ನಿವಾಸಿಯಾದ ಸುನೀಲ್ ತಮ್ಮ ಕಾರಿನಲ್ಲಿ ಮೈಸೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದರು. ಬಸ್ ಚಿಕ್ಕಮಗಳೂರಿನಿಂದ ಮೈಸೂರು ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ ಗಾಯಗಳಾಗಿವೆ. ಕಾರಿನಲ್ಲಿದ್ದ ಉಳಿದವರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದ ಆರೋಪಿಯ ಮೃತದೇಹ ಪ್ರಪಾತದಲ್ಲಿ ರಕ್ತಸಿಕ್ತವಾಗಿ ಪತ್ತೆ!

Author: Btv Kannada
Post Views: 494