ಬೆಂಗಳೂರು : ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಿಎಂ ಆಕಾಂಕ್ಷಿಯಾಗಿರುವ ಡಿಕೆಶಿ 63ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಮೈಸೂರಿನಲ್ಲಿ ಆಫ್ರಿಕನ್ ಸಿಂಹವನ್ನು ದತ್ತು ತೆಗೆದುಕೊಳ್ಳಲಾಗಿದೆ. ಈ ಸಿಂಹದ ದತ್ತುವನ್ನ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವಹಿಸಿಕೊಂಡಿದೆ.
ಅಪಾರ ಬೆಂಬಲಿಗರು ಹಾಗೂ ಅಭಿಮಾನಿ ಬಳಗವನ್ನು ಹೊಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತಿ ವರ್ಷ ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ತಮ್ಮ ಹುಟ್ಟುಹಬ್ಬ ಆಚರಣೆಯಿಂದ ದೂರವಿದ್ದಾರೆ. ಇದು ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭ. ಹೀಗಾಗಿ ಯಾರೂ ನನ್ನ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿನಂತಿ ಮಾಡಿಕೊಂಡಿದ್ದರು.
ಇದನ್ನೂ ಓದಿ : ಜನಾರ್ಧನ ರೆಡ್ಡಿ ಪುತ್ರನ ಚೊಚ್ಚಲ ಸಿನಿಮಾ ರಿಲೀಸ್ಗೆ ರೆಡಿ – ಜು.18ಕ್ಕೆ ‘ಜೂನಿಯರ್’ ಎಂಟ್ರಿ!
