ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಭರ್ಜರಿ ಗುಡ್​ನ್ಯೂಸ್ – ರಾಜ್ಯ ಸರ್ಕಾರದಿಂದ ಗೌರವಧನ ಹೆಚ್ಚಳ!

ಬೆಂಗಳೂರು : ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗುಡ್​ನ್ಯೂಸ್ ನೀಡಿದ್ದು, ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆಯನ್ನು ತಲಾ 2,000 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10,000 ರೂಪಾಯಿ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ಗೌರವ ಸಂಭಾವನೆ ನಿಗದಿಪಡಿಸಿತ್ತು. ಇದೀಗ ಈ ಮೊತ್ತಕ್ಕೆ ಹೆಚ್ಚುವರಿಯಾಗಿ 2,000 ರೂಪಾಯಿಗಳು ಸೇರ್ಪಡೆ ಆಗಿದೆ. ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12,000 ರೂಪಾಯಿ ಸಿಗಲಿದೆ.

ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ರೂಪಾಯಿ ಸಿಗಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ 2,000 ಗಳಷ್ಟು ಗೌರವಧನ ಹೆಚ್ಚಳವಾಗಿದೆ. ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ 12,000 ರೂಪಾಯಿ ನಿಗದಿಯಾಗಿತ್ತು. ಪರಿಷ್ಕೃತ ಗೌರವ ಸಂಭಾವನೆಯು 14,000 ರೂಪಾಯಿ ಆಗಿದೆ.

ಇದನ್ನೂ ಓದಿ : ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಬೃಹತ್ ಹಡಗು ಮುಳುಗಡೆ – ಆರು ಮಂದಿಯ ರಕ್ಷಣೆ!

Btv Kannada
Author: Btv Kannada

Read More