ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 31.27ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಏಪ್ರಿಲ್ 24ರಿಂದ ಮೇ 8ರವರೆಗೆ ನಡೆದಿದ್ದ ಎರಡನೇ ದ್ವಿತೀಯ ಪಿಯು ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ಹಾಜರಾಗಿದ್ದರು. 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿದ್ದ 71,964 ವಿದ್ಯಾರ್ಥಿಗಳು ಪರೀಕ್ಷೆ-2 ಅನ್ನೂ ಬರೆದಿದ್ದಾರೆ. ಇವರಲ್ಲಿ 41,719 ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ.
https //karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದು. ಮೊದಲ ಮತ್ತು ಎರಡನೇ ಪರೀಕ್ಷೆಗಳಲ್ಲಿ ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆಯನ್ನು ಜೂನ್ 6ರಿಂದ ಜೂನ್ 20ರವರೆಗೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ : 25 ವರ್ಷಗಳ ಕಾನೂನು ಹೋರಾಟಕ್ಕೆ ಜಯ.. ಹರೇ ಕೃಷ್ಟ ದೇವಾಲಯ ಬೆಂಗಳೂರು ಇಸ್ಕಾನ್ಗೆ ಸೇರಿದ್ದು – ಸುಪ್ರೀಂ ತೀರ್ಪು!

Author: Btv Kannada
Post Views: 297