ಬೆಂಗಳೂರು : ಬೆಂಗಳೂರು ಹಾಗೂ ತುಮಕೂರು ಮಧ್ಯೆ ಮೆಟ್ರೋ ರೈಲು ಸಂಪರ್ಕ ಯೋಜನೆ ಸಂಬಂಧ ಖಾಸಗಿ ಕಂಪನಿ ಸಲ್ಲಿಸಿದ್ದ ಕಾರ್ಯಸಾಧ್ಯತಾ ಪರೀಕ್ಷಾ ವರದಿಯನ್ನು ಸರ್ಕಾರಕ್ಕೆ ಬಿಎಂಆರ್ಸಿಎಲ್ ಸಲ್ಲಿಕೆ ಮಾಡಿದ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ಬೆಂಗಳೂರು ತುಮಕೂರು ಮೆಟ್ರೋ ಸಂಪರ್ಕ ಒಂದು ಸ್ಟುಪಿಡ್ ಐಡಿಯಾ ಎಂದು ಟೀಕಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ ಅವರು, ಈ ಯೋಜನೆಯನ್ನು ವಿರೋಧಿಸಲು ಕಾರಣವೇನು ಎಂಬುದನ್ನೂ ತಿಳಿಸಿದ್ದಾರೆ.
‘‘ತುಮಕೂರಿಗೆ ಮೆಟ್ರೋ ವಿಸ್ತರಣೆ ಮಾಡುವ ಕರ್ನಾಟಕ ಸರ್ಕಾರದ ನಿರ್ಧಾರ ಮೂರ್ಖತನದಿಂದ ಕೂಡಿದ್ದು, ಅದರ ಬದಲಾಗಿ ಅವರು ಬದಲಾಗಿ ಅವರು ಬೆಂಗಳೂರಿನಲ್ಲಿ ಬಾಕಿ ಇರುವ ಮೆಟ್ರೋ ಮಾರ್ಗಗಳ ಕಾಮಗಾರಿಗಳನ್ನು ಬೇಗನೆ ಪೂರ್ಣಗೊಳಿಸುವ ಮತ್ತು ಬೆಂಗಳೂರಿನೊಳಗೆ ಮೆಟ್ರೋ ಜಾಲವನ್ನು ಮತ್ತಷ್ಟು ವಿಸತರಿಸುವತ್ತ ಗಮನಹರಿಸಬೇಕು. ಮೆಟ್ರೋ ಎಂಬುದು ನಗರದೊಳಗಿನ ಸಂಪರ್ಕವನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದ್ದು. ತುಮಕೂರಿಗೆ ಆರ್ಆರ್ಟಿಎಸ್ ಅಥವಾ ಉಪನಗರ ರೈಲು ಯೋಜನೆ (ಸಬ್ ಅರ್ಬನ್ ರೈಲ್) ಒದಗಿಸಬೇಕು’’ ಎಂದು ತೇಜಸ್ವಿ ಸೂರ್ಯ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.

Author: Btv Kannada
Post Views: 158