ಬೆಂಗಳೂರು : ಕೋಟಿ ಕೋಟಿ ಕನ್ನಡಿಗರು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ RCB-KKR ಪಂದ್ಯ ಭಾರಿ ಮಳೆಯಿಂದ ಕ್ಯಾನ್ಸಲ್ ಆಗಿದೆ. ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್‌ನಡುವಿನ ಪಂದ್ಯ ಮಳೆಗೆ ಬಲಿಯಾಗಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ ಸ್ಥಗಿತಗೊಂಡಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಶನಿವಾರ ಪುನರಾರಂಭವಾಗುವ ಮುನ್ನವೇ ಮಳೆಯಿಂದ ರದ್ದಾಗಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದೆ.
ಕೆಕೆಆರ್‌ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಮಳೆಯಿಂದ ಪಂದ್ಯವೇ ರದ್ದಾಗಿರುವುದರಿಂದ ಟೂರ್ನಿಯಿಂದ ಹೊರಬಿದ್ದಿದೆ. ಪಂದ್ಯ ಮಳೆಯಿಂದ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದು ಪಾಯಿಂಟ್ ಸಿಕ್ಕಿದೆ. ಕೆಕೆಆರ್ ತಂಡ 13 ಪಂದ್ಯಗಳಲ್ಲಿ 5 ಗೆಲುವು, 6 ಸೋಲು ಮತ್ತು 2 ರದ್ದಾದ ಪಂದ್ಯದೊಂದಿಗೆ ಪ್ರಸ್ತುತ 12 ಅಂಕಗಳನ್ನು ಹೊಂದಿದೆ.
ಇನ್ನು ಆರ್ ಸಿಬಿ ಆಡಿರುವ 12 ಪಂದ್ಯಗಳಲ್ಲಿ 8 ರಲ್ಲಿ ಗೆಲುವು ಸಾಧಿಸಿದ್ದು, 3 ಪಂದ್ಯಗಳಲ್ಲಿ ಸೋತಿದ್ದು 17 ಅಂಕ ಪಡೆದು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಈಗ ಒಂದು ಪಂದ್ಯ ರದ್ದಾದರೂ ಪ್ಲೇ ಆಫ್ ಸ್ಥಾನ ಖಾತ್ರಿಯಾಗಿದೆ. ಆರ್ಸಿಬಿ ಮುಂದೆ ಇನ್ನೂ ಎರಡು ಪಂದ್ಯಗಳಿವೆ. ಆ ಎರಡು ಪಂದ್ಯಗಳಲ್ಲಿ ಒಂದನ್ನು ಗೆಲ್ಲಲೇಬೇಕು. ಇಲ್ಲದಿದ್ದರೆ, ಗುಜರಾತ್, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ಸೋಲು, ಗೆಲುವಿನ ಆಧಾರದ ಮೇಲೆ ಅವಲಂಬಿತ ಆಗಲಿದೆ. ಸದ್ಯ ಆರ್ಸಿಬಿ ಪಾಯಿಂಟ್ಸ್ ಟೇಬಲ್ನಲ್ಲಿ ಮೊದಲ ಸ್ಥಾನ ಅಲಂಕರಿಸಿರೋದು ಸಮಾಧಾನಕರ ಸುದ್ದಿಯಾಗಿದೆ.
ಇದನ್ನೂ ಓದಿ :‘ನ್ಯೂಸ್-18 ಕನ್ನಡ’ ಕೈ ಹಿಡಿದ ಕೋಟಿ ಕೋಟಿ ಕನ್ನಡಿಗರು – ರೇಟಿಂಗ್ನಲ್ಲಿ ಟಾಪ್-2.. ಕೆಲವೇ ದಿನಗಳಲ್ಲಿ ನಂಬರ್-1 ಫಿಕ್ಸ್!
