ಭಾರೀ ಮಳೆಗೆ ಮಾನ್ಯತಾ ಟೆಕ್‌ ಪಾರ್ಕ್‌ ಜಲಾವೃತ – ಪರ್ಯಾಯ ಮಾರ್ಗ ಬಳಸುವಂತೆ ಟ್ರಾಫಿಕ್ ಪೊಲೀಸರಿಂದ ಮನವಿ!

ಬೆಂಗಳೂರು : ರಾತ್ರಿ ಸುರಿದ ಭಾರೀ ಮಳೆಗೆ ಮಾನ್ಯತಾ ಟೆಕ್‌ ಪಾರ್ಕ್ ಜಲಾವೃತವಾಗಿದೆ. ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಮಳೆ ನೀರು ನಿಂತಿರುವುದರಿಂದ ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸಬೇಕೆಂದು ಬೆಂಗಳೂರು ಸಂಚಾರ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

ಇನ್ನು  ಮಹಾದೇವಪುರ, ಬೆಂಗಳೂರು ಪೂರ್ವ ವಲಯ, ಬೊಮ್ಮನಹಳ್ಳಿ, ಯಲಹಂಕ ವಲಯದಲ್ಲಿ ಭಾರೀ ಮಳೆಯಾಗಿದ್ದು, 4 ವಲಯದ 100 ಕ್ಕೂ ಹೆಚ್ಚು ಪ್ರದೇಶಗಳಿಗೆ ಸಮಸ್ಯೆಯಾಗಿದೆ.

ಹಲವು ಮನೆಗಳಿಗೆ ನೀರು ನುಗ್ಗಿ ಲೇಔಟ್ ಗಳು ಜಲಾವೃತಗೊಂಡಿದೆ. ಶಾಂತಿನಗರ, ಕೋರಮಂಗಲ, ಬೊಮ್ಮನಹಳ್ಳಿಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ನಾಗವಾರ ವಾರ್ಡ್‌ನಲ್ಲಿ ನಿವಾಸಿಗಳು ರಾತ್ರಿ ಜಾಗರಣೆ ಮಾಡಿದ್ದಾರೆ.

ಇದನ್ನೂ ಓದಿ : ವರುಣಾರ್ಭಟಕ್ಕೆ ತತ್ತರಿಸಿದ ಬೆಂಗಳೂರು – ಜನಜೀವನ ಅಸ್ತವ್ಯಸ್ತ.. ಮುಂದಿನ 12 ಗಂಟೆ ಸಿಲಿಕಾನ್​ ಸಿಟಿಯಲ್ಲಿ ಭಾರೀ ಮಳೆ ಅಲರ್ಟ್​!

 

Btv Kannada
Author: Btv Kannada

Read More