ಸ್ಯಾಂಡಲ್ವುಡ್ ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ದಂಪತಿಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಹೀಗಾಗಿ ಕುಟುಂಬಸ್ಥರು, ಬಂಧು ಮಿತ್ರರು, ಮುಖ್ಯವಾಗಿ ಅಭಿಮಾನಿಗಳು ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.
ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 22 ವರ್ಷ ತುಂಬಿದೆ. ಈ ಸಂಬಂಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಪತಿಯ ಜೊತೆಗೆ ನಿಂತುಕೊಂಡಿರೋ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ “ಶಾಶ್ವತ ಬಂಧ” ಅಂತ ಬರೆದುಕೊಂಡಿದ್ದಾರೆ. ಇದೇ ಫೋಟೋ ಈಗ ವೈರಲ್ ಆಗುತ್ತಿದೆ.
ಇನ್ನು ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ಅವರು ರೆಸಾರ್ಟ್ವೊಂದರಲ್ಲಿ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಆ ಫೋಟೋಗಳನ್ನು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಸದ್ಯ ನಟ ‘ಡೆವಿಲ್’ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಆಪ್ತರೊಬ್ಬರ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ನವ ವಧು-ವರರನ್ನು ಆಶೀರ್ವದಿಸಿದ್ದರು. ಕಳೆದ ವರ್ಷ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ದಂಪತಿ ದುಬೈನಲ್ಲಿ ಬಹಳ ಅದ್ಧುರಿಯಾಗಿ ತಮ್ಮ 21ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.
2003 ಮೇ 19ರಂದು ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರು ಧರ್ಮಸ್ಥಳದ ವಸಂತ್ ಮಹಲ್‌ನಲ್ಲಿ ಮದುವೆಯಾಗಿದ್ದರು. ದರ್ಶನ್ ಹಾಗೂ ವಿಜಯಲಕ್ಷ್ಮಿ ಇಬ್ಬರ ಮದುವೆ ಆಮಂತ್ರಣ ಪತ್ರ ಕೂಡ ವೈರಲ್ ಆಗಿದೆ.
ಇದನ್ನೂ ಓದಿ : ಪಂಜಾಬ್ನಲ್ಲಿ ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಸಾವು ಕೇಸ್ಗೆ ಟ್ವಿಸ್ಟ್ – ಕೊನೆಗೂ ‘ಆಕಾಂಕ್ಷ’ ಸಾವಿನ ರಹಸ್ಯ ರಿವೀಲ್!
