ತುಮಕೂರು : ಆಂಧ್ರಪ್ರದೇಶದ ಕರ್ನೂಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಚಿಕ್ಕನಾಯಕನಹಳ್ಳಿ ತಾಲೂಕಿನ ಬಿಜೆಪಿ ಮಾಜಿ ಅಧ್ಯಕ್ಷರಾದ ನವೀನ್, ಬಿಜೆಪಿ ಮುಖಂಡ ಸಂತೋಷ್ ಮತ್ತು ಲೋಕೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವಿಷಯ ತಿಳಿದು ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ ಸೋಮಣ್ಣನವರು ಸಂತಾಪ ಸೂಚಿಸಿದ್ದಾರೆ.
ಮೃತರಾದವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ, ಅವರ ಮೃತದೇಹಗಳನ್ನು ಗ್ರಾಮಕ್ಕೆ ತರಲು ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದು, ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.
ನವೀನ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಆರೂ ಜನ ಇನೋವಾ ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ಅಲ್ಲಿಂದ ಭಾನುವಾರ ಬೆಳಗ್ಗೆ ಶ್ರೀಶೈಲಕ್ಕೆ ಹೋಗಿ ನಂತರ ಮಹಾನಂದಿ ದರ್ಶನ ಮಾಡಿ ವಾಪಸ್ ಬರುತ್ತಿದ್ದ ವೇಳೆ ರಾತ್ರಿ 7:30ರ ಸುಮಾರಿಗೆ ಆಂಧ್ರ ಪ್ರದೇಶದ ಕರ್ನೂಲ್ ಬಳಿ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ತೀವ್ರ ಕಳವಳಗೊಂಡಿದ್ದೇನೆ – ಡಿಸಿಎಂ ಡಿಕೆಶಿ!
