ಬೆಂಗಳೂರಿನಲ್ಲಿ ಮಹಾಮಳೆಗೆ ಮೊದಲ ಬಲಿ – ಗೋಡೆ ಕುಸಿದು ಮಹಿಳೆ ಸಾವು!

ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ಓರ್ವ ಮಹಿಳೆ ಬಲಿಯಾಗಿದ್ದಾರೆ. 35 ವರ್ಷದ ಶಶಿಕಲಾ ಎಂಬುವವರ ಮೇಲೆ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆ ಮಹದೇವಪುರದ ಚನ್ನಸಂದ್ರದಲ್ಲಿ ಐ ಝಡ್ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋದಾಗ ಈ ಘಟನೆ ನಡೆದಿದೆ. ಶಶಿಕಲಾ ಕೆಲಸದ ಮಾಡುತ್ತಿದ್ದ ಸ್ಥಳದಲ್ಲಿ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಶಶಿಕಲಾ ಮೃತಪಟ್ಟಿದ್ದಾರೆ. ಇಡೀ ರಾತ್ರಿ ಮಳೆಗೆ ಗೋಡೆ ನೆನೆದಿದ್ದರಿಂದ ಏಕಾಏಕಿ ಶಶಿಕಲಾ ಮೇಲೆ ಗೋಡೆ ಬಿದ್ದಿದೆ.

ಮೃತ ಶಶಿಕಲಾ ಅವರಿಗೆ ಇಬ್ಬರು ಸಣ್ಣ ಮಕ್ಕಳಿದ್ದು, ಶಶಿಕಲಾ ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದಾರೆ. ಇವರು ಶಹಾಪುರ ಮೂಲದವರಾಗಿದ್ದು, ಕೆಲಸಕ್ಕಾಗಿ ದಂಪತಿ ಬೆಂಗಳೂರಿಗೆ ಬಂದಿದ್ದರು. ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ‘ದುಬಾರಿ ಜೀವನ ಅಭಿವೃದ್ದಿ ಶೂನ್ಯ’ – ‘ಕೈ’ ಸರ್ಕಾರದ 2 ವರ್ಷದ ಸಾಧನಾ ಸಮಾವೇಶದ ವಿರುದ್ಧ ಬಿಜೆಪಿ ಆಕ್ರೋಶ!

Btv Kannada
Author: Btv Kannada

Read More