ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ನಾಳೆ ಬೆಳಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಯಿಂದ ನಗರದಲ್ಲಿ ಅನಾಹುತ ಸಂಭವಿಸಿರುವ ಪ್ರದೇಶಗಳಿಗೆ ಆರ್. ಅಶೋಕ್ ಭೇಟಿ ನೀಡಲಿದ್ದು, ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಪರಿಶೀಲನೆಯನ್ನು ಪ್ರಾರಂಭಿಸಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಸತೀಶ್ ರೆಡ್ಡಿ, ರಾಮಮೂರ್ತಿ ಹಾಗೂ ಇತರೆ ಮುಖಂಡರು ಉಪಸ್ಥಿತರಿರಲಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ವೃತ್ತ, ಜಯನಗರ, ಕೆಆರ್ ಮಾರ್ಕೆಟ್, ಚಾಮರಾಜಪೇಟೆ, ವಿಜಯನಗರ, ಚಂದ್ರಾಲೇಔಟ್ ರಾಜಾಜಿನಗರ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಆರ್ ಆರ್ ನಗರ, ನಾಯಂಡಹಳ್ಳಿ, ಬಿಟಿಎಂ ಲೇಔಟ್, ಯಶವಂತಪುರ, ಪೀಣ್ಯ, ಮೈಕೋ ಲೇಔಟ್ ಹಾಗೂ ಬೊಮ್ಮನಹಳ್ಳಿ ಸೇರಿದಂತೆ ಹಲವೆಡೆ ನಿನ್ನೆ ಭಾರೀ ಮಳೆಯಾಗಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಮಹಾಮಳೆಗೆ ಮೊದಲ ಬಲಿ – ಗೋಡೆ ಕುಸಿದು ಮಹಿಳೆ ಸಾವು!
