ಬೆಂಗಳೂರಿನಲ್ಲಿ ಮಹಾಮಳೆಗೆ ಮತ್ತಿಬ್ಬರು ಬಲಿ – ಬೇಸ್​ಮೆಂಟ್​ನಲ್ಲಿ ತುಂಬಿದ್ದ​ ನೀರು ಖಾಲಿ ಮಾಡುವ ವೇಳೆ ದುರಂತ!​​

ಬೆಂಗಳೂರು : ಎಡೆಬಿಡದೆ ಸುರಿಯುತ್ತಿರುವ ಮಳೆ ನಗರದಲ್ಲಿ ನೂರೆಂಟು ಅವಾಂತರಗಳನ್ನು ಸೃಷ್ಟಿಸಿದೆ. ನಿನ್ನೆ ಬೆಳ್ಳಿಗೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಮಳೆಯಿಂದ ಮತ್ತಿಬ್ಬರು ಸಾವನ್ನಪ್ಪಿರುವಂತಹ ಘಟನೆ ಬಿಟಿಎಂ ಲೇಔಟ್​ನ 2ನೇ ಹಂತದ ಎನ್.ಎಸ್.ಪಾಳ್ಯದಲ್ಲಿ ನಡೆದಿದೆ. ಮಧುವನ ಅಪಾರ್ಟ್​ಮೆಂಟ್​ನ ನಿವಾಸಿ 55 ವರ್ಷದ ಮನೋಹರ ಕಾಮತ್​​ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಮೃತರು.

ಮಳೆಯಿಂದ ಮಧುವನ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​ ಜಲಾವೃತವಾಗಿತ್ತು. ಸಂಜೆ ಸುಮಾರು 6 ಗಂಟೆಗೆ ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಎಲೆಕ್ಟ್ರಿಕ್ ಶಾಕ್​ನಿಂದ ಮನೋಹರ ಕಾಮತ್ ಮತ್ತು ದಿನೇಶ್ ದುರ್ಮರಣ ಹೊಂದಿದ್ದಾರೆ.

ಸ್ಥಳಕ್ಕೆ ಮೈಕೋ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವಗಳು ಸೇಂಟ್ ಜಾನ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ಮಧುವನ ಅಪಾರ್ಟ್​ಮೆಂಟ್​ಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಬಿಟಿಎಂ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ‘ನಿದ್ರಾದೇವಿ Next Door’ ಚಿತ್ರಕ್ಕೆ ದುನಿಯಾ ವಿಜಯ್ ಸಾಥ್.. ಹಾಡು ರಿಲೀಸ್ ಮಾಡಿ ಶುಭ ಹಾರೈಸಿದ ನಟ!

Btv Kannada
Author: Btv Kannada

Read More