ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್ – ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ ಕಳ್ಳ ಅರೆಸ್ಟ್!

ಬೆಂಗಳೂರು : ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ್ದ ಖತರ್ನಾಕ್ ಮನೆಗಳ್ಳರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೇಗೂರು ನಿವಾಸಿ ಶಿವು @ಶಿವರಪ್ಪನ್ ಈ ಕಳ್ಳತನದ ಮಾಸ್ಟರ್ ಮೈಂಡ್.

ಹೆಂಡತಿ, ಮಕ್ಕಳಿಲ್ಲದ ಶಿವು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಿದ್ದಾಗ ಏರಿಯಾದಲ್ಲಿ ಸ್ನೇಹಿತರು ಮಕ್ಕಳ ಸ್ಕೂಲ್ ಫೀಸ್ ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ. ಬಳಿಕ ಶಿವು ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮನೆಗಳಿಗೆ ಕನ್ನ ಹಾಕಿದ್ದು, ಕದ್ದ ಚಿನ್ನಾಭರಣವನ್ನು ಸ್ನೇಹಿತರಾದ ಅನಿಲ್ @ಜಗ್ಗ ಮತ್ತು ವಿವೇಕ್‌ನ ಸಹಾಯದಿಂದ ಮಾರಾಟ ಮಾಡಿದ್ದಾನೆ.

ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು ಬಂದ ಹಣದಲ್ಲಿ ವಿವೇಕ್‌ಗೆ 4 ಲಕ್ಷ, ಅನಿಲ್‌ಗೆ 4 ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ. ಉಳಿದ 14 ಲಕ್ಷ ರೂ. ಹಣದಲ್ಲಿ ಏರಿಯಾದ 20 ಮಕ್ಕಳಿಗೆ ಶಾಲಾ ಹಾಗೂ ಕಾಲೇಜ್ ಫೀಸ್ ಕಟ್ಟಿದ್ದಾನೆ. ಮನೆಗಳ್ಳರ ಬೆನ್ನತ್ತಿದ್ದ ಬ್ಯಾಡರಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಿವು, ಅನಿಲ್ ಹಾಗು ವಿವೇಕ್‌ನನ್ನು ಬಂಧಿಸಿದ ಪೊಲೀಸರು 24 ಲಕ್ಷ ಮೌಲ್ಯದ 260 ಗ್ರಾಂ ಚಿನ್ನದ ಗಟ್ಟಿಯನ್ನು ಸೀಜ್ ಮಾಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬಿಳಿ ಸೀರೆಯುಟ್ಟು ಪವಿತ್ರಾ ಗೌಡ ಕೋರ್ಟ್​ಗೆ ಎಂಟ್ರಿ – ಲುಕ್​ ಮೂಲಕವೇ ‘ದಾಸ’ನಿಗೆ ಸೈಲೆಂಟ್ ಮೆಸೇಜ್ ಕೊಟ್ರಾ?

 

 

Btv Kannada
Author: Btv Kannada

Read More