ಮೈಸೂರು : ‘ನನಗೆ ಈಗಾಗಲೇ 75 ವರ್ಷವಾಗಿದೆ. ಮುಂದಿನ ಚುನಾವಣೆಗೆ ಸ್ಪರ್ಧಿಸುವ ಆಲೋಚನೆ ಇಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎಂಬ ದೃಷ್ಟಿಯಿಂದ ಚುನಾವಣೆಗೆ ಸ್ಪರ್ಧೆ ತ್ಯಜಿಸುತ್ತಿದ್ದೇನೆ’ ಎನ್ನುವ ಮೂಲಕ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದು, ಇದಕ್ಕೆ ವಯಸ್ಸಿನ ಕಾರಣ ನೀಡಿದ್ದಾರೆ. “ನನಗೆ ಈಗಾಗಲೇ 75 ವರ್ಷ ಆಗಿದೆ. ಮುಂದಿನ ಚುನಾವಣೆಗೆ ನಾನು ನಿಲ್ಲಲ್ಲ. ಮುಂದಿನ ಚುನಾವಣೆ ಬರುವ ವೇಳೆಗೆ ನನಗೆ 78 ವರ್ಷ ಆಗುತ್ತೆ. ಚುನಾವಣೆಗೆ ನಿಂತು ಗೆದ್ದರೂ ಆರೋಗ್ಯದ ದೃಷ್ಟಿಯಿಂದ ಜನರ ಸೇವೆ ಮಾಡುವುದಕ್ಕೆ ಆಗುವುದಿಲ್ಲ. ಯುವಕರಿಗೆ ಅವಕಾಶ ನೀಡಬೇಕು ಅನ್ನೋದು ನನ್ನ ಅಭಿಪ್ರಾಯ. ಹೀಗಾಗಿ ನಾನು ಚುನಾವಣೆ ರಾಜಕಾರಣಕ್ಕೆ ನಾನು ಗುಡ್ ಬೈ ಹೇಳುತ್ತೇನೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದಾರೆ.
ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯೆ ಕೊಡುವ ಅವಶ್ಯಕತೆ ಇಲ್ಲ : ಇಂದು ಕಾಂಗ್ರೆಸ್ ಸಾಧನೆ ಸಮಾವೇಶ ಹಿನ್ನೆಲೆ, ಯಾವ ಸಾಧನೆ ಮಾಡಿ ಸಮಾವೇಶ ಮಾಡ್ತಿದ್ದಾರೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಸಚಿವ ರಾಜಣ್ಣ ಪ್ರತಿಕ್ರಿಯೆ ನೀಡಿ, ಬಿಜೆಪಿ ಒಂದು ವಿರೋಧ ಪಕ್ಷವಾಗಿ ಟೀಕೆ ಮಾಡಬೇಕು. ಹಾಗಾಗಿ ಟೀಕೆ ಮಾಡ್ತಿದ್ದಾರೆ. ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯೆ ಕೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್ – ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ ಕಳ್ಳ ಅರೆಸ್ಟ್!
