ನಟಿ ರನ್ಯಾ ರಾವ್‌ಗೆ ಸಿಕ್ತು ಜಾಮೀನು – ಆದ್ರೂ ಬಿಡುಗಡೆ ಭಾಗ್ಯವಿಲ್ಲ!

ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟಿ ರನ್ಯಾ ರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ. 60 ದಿನ ಕಳೆದರೂ ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಇಬ್ಬರು ಶ್ಯೂರಿಟಿ, 2 ಲಕ್ಷ ರೂ. ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ಅಲ್ಲದೇ ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾದಂತೆ ಹಾಗೂ ದೇಶ ಬಿಟ್ಟು ಹೊರಗೆ ಹೋಗದಂತೆ ಸೂಚನೆ ನೀಡಿದೆ. ರನ್ಯಾರಾವ್ ಪರವಾಗಿ ವಕೀಲ ಗಿರೀಶ್ ವಾದ ಮಂಡಿಸಿದರು. ರನ್ಯಾ ವಿರುದ್ಧ ಕಾಪಿಪೋಸಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಹಾಗಾಗಿ ಕಾಪಿಪೋಸಾ ಕೇಸಲ್ಲಿ ಜಾಮೀನು ಸಿಗುವವರೆಗೂ ರನ್ಯಾಗೆ ಬಿಡುಗಡೆ ಭಾಗ್ಯ ಇಲ್ಲ.

ಇದನ್ನೂ ಓದಿ : ಲಿಫ್ಟ್‌ನಲ್ಲಿ ಹಠ ಹಿಡಿದು ದರ್ಶನ್ ಮೊಬೈಲ್ ನಂಬರ್ ಪಡೆದ ಪವಿತ್ರಾಗೌಡ!

Btv Kannada
Author: Btv Kannada

Read More