ಐಪಿಎಲ್ 2025ರಲ್ಲಿ ಆರ್‌ಸಿಬಿ ಉತ್ತಮ ಪ್ರದರ್ಶನದೊಂದಿಗೆ ಈಗಾಗಲೇ ಪ್ಲೇ ಆಫ್ ಪ್ರವೇಶ ಮಾಡಿದ್ದು, RCBಗೆ ಲೀಗ್ ಹಂತದ ಇನ್ನು ಎರಡು ಪಂದ್ಯಗಳು ಬಾಕಿ ಉಳಿದಿವೆ. ಮೇ 23ರಂದು RCB ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಹೈ-ವೋಲ್ಟೇಜ್ ಪಂದ್ಯ ನಡೆಯಲಿದೆ. ನಿಗದಿಯಂತೆ ಈ ಪಂದ್ಯವು ಬೆಂಗಳೂರಲ್ಲಿ ನಡೆಯಬೇಕಿತ್ತು. ಆದರೆ ಬೆಂಗಳೂರಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಂದ್ಯವನ್ನು ಲಕ್ನೋಗೆ ಶಿಫ್ಟ್ ಮಾಡಲಾಗಿದೆ.
ಹವಾಮಾನ ಇಲಾಖೆ ಮಳೆ ಸುರಿಯುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಲಕ್ನೋದ ಎಕನಾ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮೇ 17ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ RCBಗೆ ಕೋಲ್ಕತ್ತ ವಿರುದ್ಧ ಪಂದ್ಯವಿತ್ತು. ಆದರೆ ಮಳೆಯಿಂದಾಗಿ ನಡೆಸಲು ಸಾಧ್ಯವಾಗಲಿಲ್ಲ. ಪಂದ್ಯ ಕ್ಯಾನ್ಸಲ್ ಆದ ಹಿನ್ನೆಲೆಯಲ್ಲಿ ಎರಡೂ ತಂಡಗಳು ತಲಾ ಒಂದೊಂದು ಪಾಯಿಂಟ್ಸ್ ಹಂಚಿಕೊಂಡವು. ಈ ರೀತಿ ಮತ್ತೆ ಆಗಬಾರದು ಅನ್ನೋ ಉದ್ದೇಶದಿಂದ ಬೆಂಗಳೂರಿನ ಪಂದ್ಯವನ್ನು ಲಕ್ನೋಗೆ ಶಿಫ್ಟ್ ಮಾಡಲಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಜೊತೆ ಬೆಂಗಳೂರು ತಂಡ ಮೇ 27 ರಂದು ಪಂದ್ಯ ನಡೆಯಲಿದೆ. ಇನ್ನು, ಐಪಿಎಲ್ ಅಂತಿಮಘಟ್ಟ ತಲುಪಿದ್ದು, ಮೇ 29 ರಿಂದ ಪ್ಲೇ-ಆಫ್ ಪಂದ್ಯಗಳು ನಡೆಯಲಿವೆ. ಜೂನ್ 3 ರಂದು ಫೈನಲ್ ಮ್ಯಾಚ್ ನಡೆಯಲಿದೆ.
ಇದನ್ನೂ ಓದಿ : ನಟಿ ರನ್ಯಾ ರಾವ್‌ಗೆ ಸಿಕ್ತು ಜಾಮೀನು – ಆದ್ರೂ ಬಿಡುಗಡೆ ಭಾಗ್ಯವಿಲ್ಲ!
