ಮಂಡ್ಯ : ಸಮಾಜ ಸೇವಕ, RTO ಅಧಿಕಾರಿ ಮಲ್ಲಿಕಾರ್ಜುನ್ ಅವರು ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ಮಂಡ್ಯದ ಕೆ.ಆರ್.ಪೇಟೆ ತಾಲೂಕಿನಲ್ಲಿ ಸಮಾಜ ಸೇವೆಯ ಮೂಲಕ ಮನೆ ಮಾತಾಗಿರುವ RTO ಅಧಿಕಾರಿ ಮಲ್ಲಿಕಾರ್ಜುನ್ ಅವರು, ತಮ್ಮ ಜನ್ಮದಿನದ ಪ್ರಯುಕ್ತ ತಾಲೂಕಿನ SSLC/PUC/ಪದವಿಯ 450ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಿಸಿದ್ದಾರೆ.
ಹಾಗೆಯೇ ತಾಲೂಕಿನ ಜನರಿಗೆ ಪ್ರತಿಷ್ಠಿತ ಆಸ್ಪತ್ರೆಯ ನುರಿತ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಇನ್ನು ಪಟ್ಟಣದಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಿ ಸಮಾಜಮುಖಿ ಕಾರ್ಯ ಕೈಗೊಂಡಿದ್ದಾರೆ.
ಇದೇ ವೇಳೆ ಹುಟ್ಟುಹಬ್ಬದ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಲ್ಲಿಕಾರ್ಜುನ್ಗೆ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಹಲವು ಮಠಗಳ ಮಠಾಧೀಶರು ಶುಭಕೋರಿದ್ದಾರೆ.
ಸಮಾಜಮುಖಿ ಅಧಿಕಾರಿ ಎಂದೇ ಫೇಮಸ್ ಆಗಿರುವ ಮಲ್ಲಿಕಾರ್ಜುನ್ ಅವರು, ಅಭಿಮಾನಿಗಳು ತಂದ ಕೇಕ್ ಕತ್ತರಿಸಿ ವಿದ್ಯಾರ್ಥಿಗಳೊಂದಿಗೆ ನಲಿದು ಸಂಭ್ರಮಿಸಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಶುಭಕೋರಲು ಬಂದ ಸಾವಿರಾರು ಜನರಿಗೆ ಮಲ್ಲಿಕಾರ್ಜುನ್ ಅವರು ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ : ಕರ್ನಾಟಕದ ನೂತನ DG-IGPಯಾಗಿ ಇಂದು ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ನೇಮಕ?
