ನಮ್ಮ ಮೆಟ್ರೋದಲ್ಲಿ ಹೆಣ್ಮಕ್ಕಳ ಆಕ್ಷೇಪಾರ್ಹ ವಿಡಿಯೋ ಮಾಡಿ ಇನ್​ಸ್ಟಾದಲ್ಲಿ ಅಪ್ಲೋಡ್ : ವ್ಯಾಪಕ ಆಕ್ರೋಶ!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ವಾ ಎನ್ನುವ ಪ್ರಶ್ನೆ ಮೂಡುತ್ತಲೇ ಇದೆ. ಈಗೀಗ ಯುವತಿಯುರು ರಸ್ತೆಯಲ್ಲಿ ಒಬ್ಬಂಟಿಯಾಗಿ ಓಡಾಡೋದು ಕಷ್ಟ ಕಷ್ಟವಾಗಿದೆ. ರಸ್ತೆ ಬಿಡಿ, ಸರ್ಕಾರಿ ಬಸ್​, ಟ್ರೈನ್​​ನಲ್ಲೂ ಮಹಿಳೆಯರಿಗೆ ಕಿರುಕುಳದಂತಹ ಸಮಸ್ಯೆಗಳು ಎದುರಾಗುತ್ತಲೇ ಇದೆ.

ಇದೀಗ ಬೆಂಗಳೂರಿನ ನಮ್ಮ ಮೆಟ್ರೋ ಕೂಡ  ಹೆಣ್ಮಕ್ಕಳಿಗೆ ಸೇಫ್​ ಅಲ್ಲ ಎನ್ನುವಂತಾಗಿದೆ. ಮೆಟ್ರೋದಲ್ಲಿ ಓಡಾಡುವ ಯುವತಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮಾಡಿದ ಕಿಡಿಗೇಡಿಯೋರ್ವ, ಸೋಶಿಯಲ್ ಮೀಡಿಯಾದಲ್ಲಿ ಅದನ್ನ ವೈರಲ್ ಮಾಡಿದ್ದಾನೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

“ಮೆಟ್ರೋ ಕ್ಲಿಕ್ಸ್” ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ನಮ್ಮ ಮೆಟ್ರೋದಲ್ಲಿ ಓಡಾಡುವ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಅಪ್ಲೋಡ್​ ಮಾಡಲಾಗಿದೆ. 5,538 ಹಿಬಾಲಕರನ್ನು ಹೊಂದಿರುವ ಖಾತೆಯಲ್ಲಿ ಸುಮಾರು 13ಕ್ಕೂ ಹೆಚ್ಚು ವಿಡಿಯೋಗಳನ್ನು ಅಪರಿಚಿತನೋರ್ವ ಹಂಚಿಕೊಂಡಿದ್ದಾನೆ. ಮೆಟ್ರೋ ರೈಲಿನ ಒಳಗೆ, ನಿಲ್ದಾಣಗಳಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ರೆಕಾರ್ಡ್ ಮಾಡಲಾಗಿದೆ.

ಸದ್ಯ ಅಪರಿಚಿತನ ವಿಕೃತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಲ್ಲಾ ವಿಡಿಯೋಗಳು ಡಿಲೀಟ್ ಆಗಿವೆ.  ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಇನ್​ಸ್ಟಾಗ್ರಾಮ್ ಪೇಜ್ ವಿರುದ್ಧ ಸುಮೋಟೊ ಅಡಿ ಎಫ್ಐಆರ್ ದಾಖಲಾಗಿದೆ. ಬನಶಂಕರಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಮಾಜ ಸೇವಕ, RTO ಅಧಿಕಾರಿ ಮಲ್ಲಿಕಾರ್ಜುನ್​!

 

 

 

 

 

 

 

Btv Kannada
Author: Btv Kannada

Read More