ವಿಜಯಪುರ : ಮಹೇಂದ್ರ ಟಿಯುವಿ 300 ಕಾರು, ಲಾರಿ, ಖಾಸಗಿ ಬಸ್ (VRL) ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐದು ಮಂದಿ ಪ್ರಾಣ ಬಿಟ್ಟಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ NH-50ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ, ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ್ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಹಸ್ತಾಂತರಿಸಲಾಗಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ್ದು ಹೇಗೆ? ವಿಜಯಪುರದತ್ತ ಪ್ರಯಾಣ ಮಾಡುತ್ತಿದ್ದ ಮಹಿಂದ್ರಾ ಕಾರು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್ಗೆ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಗೆ ನಿಂತಿದ್ದ ಕಂಟೇನರ್ಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ನಮ್ಮ ಮೆಟ್ರೋದಲ್ಲಿ ಹೆಣ್ಮಕ್ಕಳ ಆಕ್ಷೇಪಾರ್ಹ ವಿಡಿಯೋ ಮಾಡಿ ಇನ್ಸ್ಟಾದಲ್ಲಿ ಅಪ್ಲೋಡ್ : ವ್ಯಾಪಕ ಆಕ್ರೋಶ!
