ಬೆಂಗಳೂರು : ನಗರದ ಹೊರವಲಯದ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ ಕೇಸ್ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಹೊಸೂರು ಮುಖ್ಯರಸ್ತೆಗೆ ಹೊಂದಿಕೊಂಡಿರೋ ರೈಲ್ವೆ ಬ್ರಿಡ್ಜ್ ಬಳಿ ಸುಮಾರು ಹತ್ತು ವರ್ಷ ವಯಸ್ಸಿನ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಚಲಿಸುವ ರೈಲಿನಿಂದ ಸೂಟ್ ಕೇಸ್ನಲ್ಲಿ ಶವ ತುಂಬಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸರು ಇನ್ನೂ ಸ್ಥಳಕ್ಕೆ ಬಂದಿಲ್ಲ. ಹೀಗಾಗಿ ರೈಲ್ವೆ ಪೊಲೀಸರು ಆಗಮನದ ಬಳಿಕ ಸೂಟ್ ಕೇಸ್ ಪರಿಶೀಲಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳುವ ಸಾದ್ಯತೆಯಿದೆ.
ಇದನ್ನೂ ಓದಿ : ‘ಕನ್ನಡ ಮಾತನಾಡಲ್ಲ’ ಎಂದು ದರ್ಪ ತೋರಿದ್ದ SBI ಮ್ಯಾನೇಜರ್ ಎತ್ತಂಗಡಿ!

Author: Btv Kannada
Post Views: 239