ಕೋರಮಂಗಲದಲ್ಲಿ ಮರದ ಕೊಂಬೆ ಬಿದ್ದು ವ್ಯಕ್ತಿ ಸಾವು – ಡೆಡ್ಲಿ ಸೀನ್ ಸಿಸಿಟಿವಿಯಲ್ಲಿ ಸೆರೆ!

ಬೆಂಗಳೂರು : ಕೋರಮಂಗಲದ ಪ್ರಿಂಟೊ ಜಂಕ್ಷನ್ ಬಳಿಯ 5ನೇ ಬ್ಲಾಕ್‌ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಮರದ ಕೊಂಬೆ ಬಿದ್ದು ಮೂಡಲಗಿರಿಯಪ್ಪ (48) ಎಂಬುವರು ಮೃತಪಟ್ಟಿದ್ದಾರೆ. ರಮೇಶ್ ಅವರು ಗಾಯಗೊಂಡಿದ್ದಾರೆ.

ಮೂಡಲಗಿರಿಯಪ್ಪ ಹಾಗೂ ರಮೇಶ್ ಅವರು ಕೋರಮಂಗಲ 5ನೇ ಬ್ಲಾಕ್‌ನಲ್ಲಿ ಬುಧವಾರ ಮಧ್ಯಾಹ್ನ 2.45ರ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದರು. ಈ ವೇಳೆ ಏಕಾಏಕಿ ಮರದ ಕೊಂಬೆ ಬಿದ್ದು, ಇಬ್ಬರೂ ಗಾಯಗೊಂಡಿದ್ದರು.

ಮರದ ಕೊಂಬೆ ಬಿದ್ದ ರಭಸಕ್ಕೆ ಮೂಡಲಗಿರಿಯಪ್ಪ ರಸ್ತೆಗೆ ಉಲ್ಟಾ ಅಪ್ಪಳಿಸಿದ್ದು, ತಲೆಗೆ ಗಂಭೀರ ಗಾಯವಾಗಿ ರಕ್ತಸ್ರಾವ ಆಗಿದೆ. ಕೂಡಲೇ ಸ್ಥಳೀಯರು ಅವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಗಿರಿಯಪ್ಪ ಮೃತಪಟ್ಟಿದ್ದಾರೆ. ಘಟನೆಯ ಡೆಡ್ಲಿ ಸೀನ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಘಟನಾ ಸಂಬಂಧ ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಹೀರೋ ಮಡೆನೂರು ಮನು ವಿರುದ್ಧ ರೇಪ್ ಕೇಸ್!

Btv Kannada
Author: Btv Kannada

Read More