ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಇದೀಗ ಹಾಸನದ ಶಾಂತಿಗ್ರಾಮದ ಮಡೆನೂರುನಲ್ಲಿ ಅರೆಸ್ಟ್ ಆಗಿದ್ದಾನೆ.
ಅತ್ಯಾಚಾರ ಕೇಸ್ ದಾಖಲಾದ ಬಳಿಕ ಮನು ಊರಲ್ಲಿ ತಲೆಮರೆಸಿಕೊಂಡಿದ್ದನು. ಈಗ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ಮನು ಅರೆಸ್ಟ್ ಆಗಿದ್ದು, ಮಡೆನೂರು ಮನುನ ಬಂಧಿಸಿ ಪೊಲೀಸರು ಕರೆತರುತ್ತಿದ್ದಾರೆ.
ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ನಟಿ ಮಡೆನೂರು ಮನು ವಿರುದ್ಧ ಆರೋಪ ಮಾಡಿದ್ದಾರೆ. ಹೀಗಾಗಿ ನಟಿ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ನೀಡಿರುವ ದೂರಿನನ್ವಯ ಮಡೆನೂರು ಮನು ವಿರುದ್ಧ FIR ದಾಖಲಾಗಿದೆ.
ಇದನ್ನೂ ಓದಿ : ಕೋರಮಂಗಲದಲ್ಲಿ ಮರದ ಕೊಂಬೆ ಬಿದ್ದು ವ್ಯಕ್ತಿ ಸಾವು – ಡೆಡ್ಲಿ ಸೀನ್ ಸಿಸಿಟಿವಿಯಲ್ಲಿ ಸೆರೆ!

Author: Btv Kannada
Post Views: 264