ಬೆಂಗಳೂರು : ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರು ನಾಮಕರಣ ಮಾಡಲು ರಾಜ್ಯ ಸರ್ಕಾರ ಇಂದು ತೀರ್ಮಾನ ಮಾಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದು, ರಾಮನಗರ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಸಂಪುಟದಲ್ಲಿ ತೀರ್ಮಾನ ಆಗಿದೆ. ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತೆ. ರಾಮನಗರದ ಜಿಲ್ಲಾ ಕೇಂದ್ರದಲ್ಲಿ ಯಾವುದೇ ಬದಲಾವಣೆ ಇಲ್ಲ. ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರು ನಾಮಕರಣ ಮಾಡುವ ಬಗ್ಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಸಂಬಂಧ ಅಧಿಕೃತವಾಗಿ ಆದೇಶ ಹೊರ ಬೀಳಲಿದೆ. ಜಿಲ್ಲೆಗೆ ರಾಮನಗರವೇ ಜಿಲ್ಲಾಕೇಂದ್ರ ಆಗಿರಲಿದೆ ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.
ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ವಿರೋಧಗಳ ನಡುವೆಯೂ ಡಿಸಿಎಂ ಡಿಕೆಶಿ ಅವರು ಹಠ ಬಿಡದೇ ಗೆದ್ದಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ಡಿಕೆಶಿ ಅಡಿಗಲ್ಲು ಹಾಕಿದ್ದು, ಬ್ರ್ಯಾಂಡ್ ಬೆಂಗಳೂರಿಗೆ ಇದೊಂದು ದೊಡ್ಡ ಅಡಿಪಾಯವಾಗಿದೆ.
ಇದನ್ನೂ ಓದಿ : ‘Zee5’ ನಲ್ಲಿ ಅಯ್ಯನ ಮನೆ ರೆಕಾರ್ಡ್ – 100 ಮಿಲಿಯನ್ ಮಿನಿಟ್ ಸ್ಟ್ರೀಮಿಂಗ್ ಕಂಡ ಮಿನಿ ವೆಬ್ ಸೀರೀಸ್!
