ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್ ಎದುರಾಗಿದೆ. ನೇರಳೆ ಮಾರ್ಗದ ವೈಟ್ಫೀಲ್ಡ್ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರ ಧಿಡೀರ್ ಸ್ಥಗಿತವಾಗಿದೆ.
ನಮ್ಮ ಮೆಟ್ರೋ ಸೇವೆಯು ಎಂದಿನಂತೆ ಇಂದು ಶುಕ್ರವಾರವು ಸಹ ಕಾರ್ಯಾಚರಣೆ ನಡೆಸಬೇಕಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ಮೆಟ್ರೋ ನೇರಳೆ ಮಾರ್ಗದಲ್ಲಿ ಬೆಳ್ಳಂಬೆಳಗ್ಗೆ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಕಂಗಾಲಾಗಿದ್ದರು. ಪರ್ಪಲ್ ಲೈನ್ನಲ್ಲಿ ಕಾಡುಗೋಡಿ ಟು ಚಲ್ಲಗಟ್ಟ ಸಂಚಾರ ಮಾಡುತ್ತದೆ. ಇಂದು ಮುಂಜಾನೆ 05 ಗಂಟೆಗೆ ಕಾಡುಗೋಡಿಯಲ್ಲಿ ಮೆಟ್ರೋ ಕೆಟ್ಟು ನಿಂತಿದೆ. ಪರಿಣಾಮ ಉಜ್ವಾಲ ಟು ಚಲ್ಲಘಟ್ಟ ನಡುವೆ ಮೆಟ್ರೋ ಸಂಚಾರ ಮಾಡುತ್ತಿದೆ. ಹೀಗಾಗಿ 05 ಗಂಟೆಗೆ ಆರಂಭವಾಗಬೇಕಿದ್ದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲ್ ನಿಗಮ (BMRCL) ಅಧಿಕೃತವಾಗಿ ಮಾಹಿತಿ ನೀಡಿದ್ದು, ವಿಷಾಧಿಸಿದೆ. ತಾಂತ್ರಿಕ ದೋಷದ ಕಾರಣ ಇಂದು ಮುಂಜಾನೆ ನೇರಳೆ ಮಾರ್ಗದ ಸೇವೆಗಳಲ್ಲಿ ವ್ಯತ್ಯಯ ಸಾರ್ವಜನಿಕರಿಗೆ ಈ ಮೂಲಕ ತಿಳಿಸುವುದೇನೆಂದರೆ ಇಂದು, 23ನೇ ಮೇ 2025 ರಂದು ಬೆಳಿಗ್ಗೆ 5:00 ಗಂಟೆಯಿಂದ ನೇರಳೆ ಮಾರ್ಗದ ವೈಟ್ಫೀಲ್ಡ್ (ಕಡುಗೋಡಿ) ಮೆಟ್ರೋ ಸ್ಟೇಷನ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಸ್ಟೇಷನ್ನಿಂದ ಟ್ರೇನ್ಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ ಎಂದು ತಿಳಿಸಲಾಗುತ್ತದೆ. ಹಾಗಾಗಿಯು, ಮೆಟ್ರೋ ಸೇವೆ ನೇರಳೆ ಮಾರ್ಗದ ಹೋಪ್ಫಾರ್ಮ್ ಚನ್ನಸಂದ್ರ ನಿಲ್ದಾಣ ಮತ್ತು ಚಳ್ಳಘಟ್ಟ ನಿಲ್ದಾಣಗಳ ನಡುವೆ ಮಾತ್ರ ಕಾರ್ಯನಿರ್ವಹಿಸಲಿವೆ. ಹಸಿರು ಮಾರ್ಗದಲ್ಲಿ ಸಾಮಾನ್ಯ ಸೇವೆಗಳು ಮುಂದುವರಿಯುತ್ತವೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದಿದೆ.
ಇದನ್ನೂ ಓದಿ : ಚಿತ್ರದುರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಪಿಕಪ್ ಡಿಕ್ಕಿ.. ಇಬ್ಬರು ದುರ್ಮರಣ!
