ತಂದೆಯನ್ನೇ ಕೊಲ್ಲಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ? ಪೊಲೀಸ್ ಠಾಣೆ ಮೆಟ್ಟಿಲೇರಿದ ಬಾಲಕೃಷ್ಣ ನಾಯಕ್!

ಬೆಂಗಳೂರು : ಚೈತ್ರಾ ಕುಂದಾಪುರ ಹಾಗೂ ಅವರ ತಂದೆ ಬಾಲಕೃಷ್ಣ ನಾಯಕ್ ನಡುವಿನ ಜಗಳ ಬೀದಿಗೆ ಬಂದಿದೆ. ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಾ ಇದ್ದಾರೆ. ಇದೀಗ ತಂದೆ ಬಾಲಕೃಷ್ಣ ನಾಯಕ್ ಅವರೇ ಮಗಳು ಚೈತ್ರಾ ವಿರುದ್ಧ ಕೊಲೆ ಬೆದರಿಕೆ ಆರೋಪ ಮಾಡಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಬೆನ್ನಲ್ಲೇ ತಂದೆಯನ್ನು ಕೊಲೆಗೈಯ್ಯಲು ಚೈತ್ರಾ ಸುಪಾರಿ ನೀಡಿದ್ದಾರಾ ಎನ್ನುವ ಚರ್ಚೆಗಳು ನಡೆಯುತ್ತಿದೆ. ಸದ್ಯ ಇದು ಯಾವ ಹಂತಕ್ಕೆ ಹೋಗಿ ಮುಟ್ಟುತ್ತದೆ ಎಂದು ಕಾದು ನೋಡಬೇಕು.

ತಂದೆಗೆ ಕೊಲೆ ಬೆದರಿಕೆ ಹಾಕಿದ್ದಾರಂತೆ ಚೈತ್ರಾ ಕುಂದಾಪುರ : ಮಗಳು ಚೈತ್ರಾ ಕುಂದಾಪುರ ವಿರುದ್ಧ ತಂದೆ ಬಾಲಕೃಷ್ಣ ನಾಯಕ್ ಗಂಭೀರ ಆರೋಪ ಮಾಡಿದ್ದು, ಮಗಳು ತಮಗೆ ಕೊಲೆ ಬೆದರಿಕೆ ಹಾಕಿದ್ದಾಳೆ ಎಂದು ದೂರಿನಲ್ಲಿ ಬಾಲಕೃಷ್ಣ ನಾಯಕ್‌ ಉಲ್ಲೇಖಿಸಿದ್ದಾರೆ.

ಚೈತ್ರಾ ಕುಂದಾಪುರ ಹಾಗೂ ತಂದೆ ಬಾಲಕೃಷ್ಣ ನಾಯಕ್
ಚೈತ್ರಾ ಕುಂದಾಪುರ ಹಾಗೂ ತಂದೆ ಬಾಲಕೃಷ್ಣ ನಾಯಕ್

‘’ನನ್ನ ಮಗಳು ಆಕೆಯ ಸ್ನೇಹಿತನಾದ ಶ್ರೀಕಾಂತ್ ಈತನನ್ನು ಮದುವೆಯಾಗಲು ನಿರ್ಧರಿಸಿದ ವಿಷಯ ತಿಳಿಯಿತು. ಆಗ ನಾನು ಅವಳ ಬಳಿ ಆತನನ್ನು ಮದುವೆ ಆಗುವುದು ಸರಿಯಲ್ಲ, ಆತನು ಸರಿಯಿಲ್ಲ ಎಂದು ಹೇಳಿದಾಗ ನನ್ನ ಮಗಳು ಚೈತ್ರ ಹಾಗೂ ನನ್ನ ಹೆಂಡತಿ ರೋಹಿಣಿ ಇವರುಗಳು ಸೇರಿ ನನ್ನ ಬಳಿ ಒಂದು ವೇಳೆ ಆತನನ್ನು ಬಿಟ್ಟು ಬೇರೆ ಹುಡುಗನನ್ನು ಮದುವೆಯಾಗುವುದಾದರೆ ನನಗೆ ರೂ.5,00,000/- ನಗದು ನೀಡಬೇಕೆಂದು ಒತ್ತಡ ಹೇರಿದರು ಹಾಗೂ ಆ ಮದುವೆಗೆ ಒಪ್ಪದೇ ಇದಲ್ಲಿ ನನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುತ್ತಾಳೆ. ಅದಕ್ಕೆ ನಾನು ಒಪ್ಪಲಿಲ್ಲ’’ ಎಂದು ದೂರಿನಲ್ಲಿ ಬಾಲಕೃಷ್ಣ ನಾಯಕ್ ಬರೆದಿದ್ದಾರೆ.

ಸುಪಾರಿ ನೀಡಿ ಕೊಲೆ ಮಾಡಿಸುವುದಾಗಿ ಬೆದರಿಕೆ : ’ಆಕೆಯ ಮದುವೆಯು ಶ್ರೀಕಾಂತ್‌ನೊಂದಿಗೆ ನಿಶ್ಚಯವಾಗಿ ಮದುವೆಗೆ ನಾನು ಬಾರದೇ ಇದ್ದಲ್ಲಿ ನನ್ನನ್ನು ಹಾಗೂ ನನ್ನ ಹಿರಿಯ ಮಗಳು ಗಾಯತ್ರಿಯನ್ನು ಭೂಗತ ದೊರೆಗಳಿಗೆ ಸುಪಾರಿ ನೀಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುತ್ತಾಳೆ’’ ಎಂದು ಚೈತ್ರಾ ಕುಂದಾಪುರ ವಿರುದ್ಧ ತಂದೆ ಬಾಲಕೃಷ್ಣ ನಾಯಕ್‌ ದೂರಿದ್ದಾರೆ.

ಆಸ್ತಿಗಾಗಿ ಬೆದರಿಕೆ : ‘’ಕುಂದಾಪುರದಲ್ಲಿರುವ ನನಗೆ ಸೇರಿದ ಆಸ್ತಿಯನ್ನು ಯಾವ ರೀತಿಯಲ್ಲಿ ತನ್ನ ಹೆಸರಿಗೆ ಮಾಡಿಕೊಳ್ಳಬೇಕೆಂದು ಗೊತ್ತಿದೆ. ಹಾಗೆಯೇ ತನ್ನ ಹೆಸರಿಗೆ ಸದರಿ ಆಸ್ತಿಯನ್ನು ಮಾಡಿಕೊಂಡೇ ಕೊಳ್ಳುತ್ತೇನೆಂದು ಬೆದರಿಕೆ ಹಾಕಿರುತ್ತಾಳೆ. ಆಕೆಗೆ ಭೂಗತ ದೊರೆಗಳ ಸಂಪರ್ಕವಿದ್ದು, ಆಕೆ ಯಾವುದೇ ಹೇಯ ಕೃತ್ಯ ಮಾಡಲು ಹೇಸುವವಳಲ್ಲ. ಆಕೆಯು ಈಗಾಗಲೇ ನಾನು ಮೃತಪಟ್ಟಿರುತ್ತೇನೆಂದು ಸಾರ್ವಜನಿಕವಾಗಿ ಹೇಳುತ್ತಾ ಬಂದಿರುತ್ತಾಳೆ’’ ಎಂದು ಬಾಲಕೃಷ್ಣ ನಾಯಕ್ ದೂರಿದ್ದಾರೆ. ಚೈತ್ರಾ ಕುಂದಾಪುರ ಬೆದರಿಕೆ ಹಾಕಿರುವುದರಿಂದ ತಮಗೆ ಹಾಗೂ ತಮ್ಮ ಹಿರಿಯ ಮಗಳು ಗಾಯತ್ರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ತಂದೆ ಬಾಲಕೃಷ್ಣ ನಾಯಕ್‌ ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಹಾಗೇ, ಚೈತ್ರಾ ಕುಂದಾಪುರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಳ್ಳಂಬೆಳಗ್ಗೆ ಶಾಕ್ – ವೈಟ್‌ಫೀಲ್ಡ್ ಸ್ಟೇಷನ್​ನಲ್ಲಿ ಸಂಚಾರ ದಿಢೀರ್​​ ಸ್ಥಗಿತ!

Btv Kannada
Author: Btv Kannada

Read More