ಮೈಸೂರು : ಸ್ಯಾಂಡಲ್ವುಡ್ ನಟ ದರ್ಶನ್ಗೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಲೇ ಇದ್ದು, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದ ದರ್ಶನ್ ವಿಚಾರಣೆಗೆ ಕೋರ್ಟ್‌ಗೆ ಹಾಜರಾಗುತ್ತಿದ್ದಾರೆ. ಇದೀಗ ಹಳೇ ಪ್ರಕರಣದಲ್ಲಿ ತಿ.ನರಸೀಪುರ ನ್ಯಾಯಾಲಯದಿಂದ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿಯಾಗಿದೆ.
ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿರುವ ನ್ಯಾಯಾಲಯ ʼಬಾರ್ ಹೆಡೆಡ್ ಗೂಸ್ʼ ಎಂಬ 4 ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ಸಾಕಿರುವ ನಟ ದರ್ಶನ್ ವಿಚಾರಣೆಗೆ ಬರುವಂತೆ ನೋಟಿಸ್ನಲ್ಲಿ ನೀಡಿದೆ.
ದರ್ಶನ್ ತೋಟದ ಮೇಲೆ ದಾಳಿ ಮಾಡಿದ್ದ ಅರಣ್ಯಾಧಿಕಾರಿಗಳು ವಿದೇಶಿ ಪ್ರಭೇದದ ಬಾತು ಕೋಳಿಗಳನ್ನು ವಶಕ್ಕೆ ಪಡೆದಿದ್ದರು. ಈ ಬಾರ್ ಹೆಡೆಡ್ ಗೂಸ್ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ಇವುಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧ. ಈ ವಿದೇಶಿ ಪ್ರಭೇದದ ಬಾತುಕೋಳಿಗಳನ್ನು ಸ್ನೇಹಿತರು ನೀಡಿದ್ದರು ಎಂದು ದರ್ಶನ್ ಸ್ಪಷ್ಟನೆ ನೀಡಿದ್ದರು. ನಟನ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಾಗಿತ್ತು. ಇದೀಗ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ದರ್ಶನ್ ದಂಪತಿಗೆ ಸಮನ್ಸ್ ನೀಡಿದೆ.
ಇದನ್ನೂ ಓದಿ : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ಗೆ ಧನ್ಯವಾದ ಅರ್ಪಿಸಿದ ಒಕ್ಕಲಿಗರ ಸಂಘ!
