ಬೆಂಗಳೂರು : ಮೂರು ವರ್ಷಗಳ ಹಿಂದೆ ಭಾರತ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳನ್ನು ಬೆಚ್ಚಿ ಬೀಳಿಸಿದ್ದ ಮಹಾಮಾರಿ ಕೊರೋನಾ ಮತ್ತೊಮ್ಮೆ ತಲೆ ಎತ್ತಿದೆ. ಲಾಕ್‌ಡೌನ್‌ನಂತಹ ಹಿಂದೆಂದೂ ಕಂಡು ಕೇಳರಿಯದಂತಹ ಪರಿಸ್ಥಿತಿಯನ್ನು ಸೃಷ್ಟಿಸಿದ್ದ ಕೊರೋನಾ ಇದೀಗ ಮತ್ತೆ ಕೆಲವು ದೇಶಗಳನ್ನು ಕಾಡಲು ಆರಂಭಿಸಿದೆ.
ಈಗಾಗಲೇ ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಎಬ್ಬಿಸಿರುವ ಕೊರೋನಾ ಹೊಸ ತಳಿ ಈಗ ಕರ್ನಾಟಕದಲ್ಲಿ ನಿಧಾನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಮೇ ತಿಂಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಜನವರಿಯಲ್ಲಿ ಮೂರು ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಫೆಬ್ರವರಿಯಲ್ಲಿ ಕೇವಲ 1ಕೇಸ್ ಪತ್ತೆಯಾಗಿತ್ತು. ಮಾರ್ಚ್‌ನಲ್ಲೂ ಮೂರು, ಏಪ್ರಿಲ್ ತಿಂಗಳಲ್ಲೂ ಕೇವಲ 3 ಕೇಸ್‌ಗಳು ದಾಖಲಾಗಿದ್ದವು. ಆದರೆ, ಮೇ ತಿಂಗಳು ಇನ್ನೂ ಮುಗಿದಿಲ್ಲ, ಆಗಲೇ ರಾಜ್ಯದಲ್ಲಿ 22 ಪ್ರಕರಣಗಳು ಕೊರೋನಾ ಕೇಸ್ ಪತ್ತೆಯಾಗಿವೆ.
ಅದರಲ್ಲಿ 9 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇಲ್ಲಿಯವರೆಗೆ 22 ಸಕ್ರಿಯೆ ಕೊರೋನಾ ಸೋಂಕು ಪ್ರಕರಣ ವರದಿಯಾಗಿದ್ದು, ಯಾರೂ ಆಸತ್ರೆಗೆ ದಾಖಲಾಗಿಲ್ಲ, ಜತೆಗೆ ತೀವ್ರ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ರೂಪಾಂತರಿ ಆತಂಕ ಬೇಡ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : ವರ್ಲ್ಡ್ ವೈಡ್ ಅಬ್ಬರಿಸೋಕೆ ‘ಕಾಂತಾರ ಚಾಪ್ಟರ್ 1’ ರೆಡಿ.. ಅ. 2ರಂದೇ ಸಿನಿಮಾ ರಿಲೀಸ್ – ಹೊಂಬಾಳೆ ಫಿಲ್ಮ್ಸ್ ಸ್ಪಷ್ಟನೆ!
