ರಾಮನಗರ : ಮೈಸೂರು ಸ್ಯಾಂಡಲ್ ಸೋಪ್‌ಗೆ 6.20 ಕೋಟಿ ರೂ. ನೀಡಿ ನಟಿ ತಮನ್ನಾ ಭಾಟಿಯಾರನ್ನ ರಾಯಭಾರಿಯಾಗಿ ನೇಮಕ ಮಾಡಿಕೊಂಡಿರುವ ವಿಚಾರಕ್ಕೆ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರಹಾಕುತ್ತಲೇ ಇದ್ದಾರೆ. ಈ ಸಂಬಂಧ ಇದೀಗ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
ಈ ಬಗ್ಗೆ ರಾಮನಗರದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿ, ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾನು ಬೇಡ, ಸುಮನ್ನಾನು ಬೇಡ ನಾನೇ ರಾಯಭಾರಿ ಆಗ್ತೀನಿ. ತಮಿಳು, ತೆಲುಗಿನವರು ಯಾರೂ ಬೇಡ. ಶ್ರೀಗಂಧ, ಮೈಸೂರು ಇವೆರಡೂ ಸಹ ಪ್ರಪಂಚದಲ್ಲೇ ಬ್ರಾಂಡ್. ಸಿಎಂ, ಡಿಸಿಎಂ, ಸೇರಿದಂತೆ ರಾಜ್ಯದ ಎಲ್ಲಾ ಮಂತ್ರಿಗಳು, ಶಾಸಕರು, ಸರ್ಕಾರಿ ಅಧಿಕಾರಿಗಳು ಸ್ಯಾಂಡಲ್ ಸೋಪಿನಲ್ಲಿ ಸ್ನಾನ ಮಾಡಲಿ. ಇವರೆಲ್ಲಾ ಸ್ಯಾಂಡಲ್ ಸೋಪಿನಲ್ಲಿ ಸ್ನಾನ ಮಾಡಿದ್ರೆ ಅದೇ ದೊಡ್ಡ ರಾಯಭಾರಿ ಎಂದಿದ್ದಾರೆ.
ತಮನ್ನಾಗೆ 6.20 ಕೋಟಿ ರೂ. ಕೊಟ್ಟಿರೋದರಲ್ಲಿ ದೊಡ್ಡ ರಾಜಕೀಯ ಇದೆ. ಸಿಕ್ಕಸಿಕ್ಕವರಿಗೆ ಕೋಟಿ ಕೋಟಿ ಕೊಟ್ರೆ ನಾಳೆ ಕಾರ್ಖಾನೆ ಮುಚ್ಚಬೇಕಾಗುತ್ತೆ. ಸ್ಯಾಂಡಲ್ ಸೋಪ್ ಕನ್ನಡಿಗರ ಸೋಪ್. ಎಲ್ಲರೂ ಸ್ಯಾಂಡಲ್ ಸೋಪ್ ಬಳಸಿ, ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ ಎಂದು ವಾಟಾಳ್ ಹೇಳಿದ್ದಾರೆ.
ಇದನ್ನೂ ಓದಿ : ಮಾಜಿ ನಕ್ಸಲರನ್ನು 3 ಪ್ರಕರಣಗಳಿಂದ ಖುಲಾಸೆಗೊಳಿಸಿದ ಎನ್‌ಐಎ ವಿಶೇಷ ನ್ಯಾಯಾಲಯ!
