ಬೆಂಗಳೂರು : ನಿರಂತರ ದರ ಏರಿಕೆ ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಈ ತಿಂಗಳು 29ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ.
ಈ ಹಿನ್ನೆಲೆ ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದ್ದು, ಈ ತಿಂಗಳು 29ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಸ್ಟೋರ್ ಕ್ಲೋಸ್ ಮಾಡಲು ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ.
CL9 ಬಾರ್ ಆ್ಯಂಡ್ ರೆಸ್ಟೋರೆಂಟ್
– ಮೊದಲು ಲೈಸೆನ್ಸ್ ಶುಲ್ಕ- 8,62,000 ರೂ
– ಈಗ ಅದನ್ನು 15,00,000 ರೂ.ಗೆ ಹೆಚ್ಚಿಸಲಾಗಿದೆ.
– ಸೆಸ್ 2,25,000 ರೂ. ಸೇರಿ ಒಟ್ಟು 17,25,000 ರೂ
CL 6A ಸ್ಟಾರ್ ಹೋಟೆಲ್ ಲೈಸೆನ್ಸ್ ಶುಲ್ಕ
– ಮೊದಲು 9,75,000 ರೂ
– ಈಗ 20 ಲಕ್ಷ ರೂ
– ಸೆಸ್ 3 ಲಕ್ಷ ರೂ. ಸೇರಿ ಒಟ್ಟು 23 ಲಕ್ಷ ರೂ.
CL 7 ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್ ಲೈಸೆನ್ಸ್ ಶುಲ್ಕ
– ಮೊದಲು 9,75,000 ರೂ.
– ಈಗ 17,00,000 ರೂ
– ಸೆಸ್ 2,55,000 ರೂ. ಸೇರಿ ಒಟ್ಟು 19,550,00 ರೂ.
ಇನ್ನು ಇದೇ 26ರಂದು ಮದ್ಯ ಮಾರಾಟಗಾರರ ಸಂಘದ ಜೊತೆಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವೇಳೆ ಮದ್ಯ ಮಾರಾಟಗಾರರ ಬೇಡಿಕೆಗಳನ್ನು ಈಡೇರಿಸಲಿಲ್ಲ ಅಂದರೆ 29ರಿಂದ ನಿರಂತರವಾಗಿ ಮದ್ಯದ ಅಂಗಡಿಗಳನ್ನು ಬಂದ್ ಮಾಡಲು ರಾಜ್ಯ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ.
ಇದನ್ನೂ ಓದಿ : ಅಪ್ರಾಪ್ತ ಬಾಲಕಿ ಮೇಲೆ ರಾಮ ಮಠದ ಸ್ವಾಮೀಜಿಯಿಂದ ಅತ್ಯಾಚಾರ ಆರೋಪ – ಪೋಕ್ಸೋ ಕೇಸ್ ದಾಖಲು!
