ನವದೆಹಲಿ : ಐಪಿಎಲ್ ಬಳಿಕ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇಂಗ್ಲೆಂಡ್ ವಿರುದ್ಧ ನಡೆಯುವ ಟೆಸ್ಟ್ ಸರಣಿಗೆ BCCI ಟೀಂ ಇಂಡಿಯಾ ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದೆ. ನಿರೀಕ್ಷೆಯಂತೆ ರೋಹಿತ್ ಶರ್ಮಾ ನಿವೃತ್ತಿ ಘೋಷಣೆಯ ಬಳಿಕ ಯುವ ಆಟಗಾರ ಶುಭ್‌ಮನ್ ಗಿಲ್ ಅವರಿಗೆ ಬಿಸಿಸಿಐ ಮಣೆ ಹಾಕಿದೆ. ನೂತನ ನಾಯಕ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆ ಮಾಡಲಾಗಿದೆ.
ಭಾರತ ಟೆಸ್ಟ್ ತಂಡ ಹೀಗಿದೆ : ಶುಭ್‌ಮನ್ ಗಿಲ್ ನಾಯಕ, ರಿಷಬ್ ಪಂತ್ ಉಪನಾಯಕ ಹಾಗೂ ವಿಕೆಟ್ ಕೀಪರ್ ಆಗಿ ಆಯ್ಕೆ ಆಗಿದ್ದಾರೆ. ಇನ್ನುಳಿದಂತೆ ಯಶಸ್ವಿ ಜೈಸ್ವಾಲ್, ಕೆ.ಎಲ್ ರಾಹುಲ್, ಸಾಯಿ ಸುಧರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತಿಶ್ ಕುಮಾರ್ ರೆಡ್ಡಿ, ಧ್ರುವ್ ಜುರೇಲ್, ಆಲ್ರೌಂಡರ್ಗಳಾದ ರವೀಂದ್ರ ಜಡೇಜಾ, ವಾಷಿಗ್ಟಂನ್ ಸುಂದರ್. ಶಾರ್ದೂಲ್ ಠಾಕೂರ್ ಸ್ಥಾನ ಪಡೆದ್ರೆ, ವೇಗಿಗಳ ಕೋಟಾದಲ್ಲಿ ಜಸ್ಪ್ರಿತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ ದೀಪ್ ಯಾದವ್, ಆರ್ಶ್ದೀಪ್ ಸಿಂಗ್ಗೆ ಅವಕಾಶ ನೀಡಲಾಗಿದೆ.
ಮೂವರು ಕನ್ನಡಿಗರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ : ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೂವರು ಕನ್ನಡಿಗರು ಆಯ್ಕೆಯಾಗಿದ್ದಾರೆ. ಆರಂಭಿಕನಾಗಿ ಕನ್ನಡಿಗ ಕೆ.ಎಲ್.ರಾಹುಲ್ಗೆ ಟೆಸ್ಟ್ ತಂಡದಲ್ಲಿ ಸ್ಥಾನ ಉಳಿಸಿಕೊಂಡ್ರೆ, ಐಪಿಎಲ್ ಹಾಗೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅದ್ಬುತ ಪ್ರದರ್ಶನ ನೀಡಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ವೇಗಿಗಳ ಕೋಟಾದಲ್ಲಿ ಚಾನ್ಸ್ ಗಿಟ್ಟಿಸಿದ್ದಾರೆ. 8 ವರ್ಷಗಳ ಬಳಿಕ ಕರುಣ್ ನಾಯರ್ ಟೆಸ್ಟ್ ತಂಡಕ್ಕೆ ಕಮ್ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ನಾವೆಲ್ಲರೂ ಬಂದಿದ್ದೇವೆ.. ನಿಮಗೆ ದಮ್ ಇದ್ರೆ ಕೂಡಿ ಹಾಕಿ ನೋಡೋಣ – ಕಲಬುರಗಿಯಲ್ಲಿ ಕಾಂಗ್ರೆಸ್ ವಿರುದ್ದ ಆರ್. ಅಶೋಕ್ ಗುಡುಗು!
