ಬೆಂಗಳೂರಿನಲ್ಲಿ ಕೊರೋನಾಗೆ ಮೊದಲ ಬಲಿ – ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಸಂಖ್ಯೆ 38ಕ್ಕೆ ಏರಿಕೆ!

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ ಹೆಚ್ಚುತ್ತಿದ್ದು, ಕರ್ನಾಟಕದಲ್ಲಿ ಶನಿವಾರ ಒಂದೇ ದಿನ 5 ಪಾಸಿಟಿವ್ ಕೇಸ್ ದಾಖಲಾಗಿವೆ. ಬೆಂಗಳೂರಿನಲ್ಲಿ 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ ಮೂಲದ 84 ವರ್ಷದ ವೃದ್ಧ ಉಸಿರಾಟದ ಸಮಸ್ಯೆ ಹಾಗೂ ಅಂಗಾಂಗ ವೈಫಲ್ಯ ಖಾಯಿಲೆಗಳಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಸಹ ಕೋವಿಡ್‌ಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಶನಿವಾರ ವಿಜಯನಗರ ಜಿಲ್ಲೆಯಲ್ಲಿ ಒಬ್ಬರು, ಮೈಸೂರಿನಲ್ಲಿ ಇಬ್ಬರಿಗೆ ಮತ್ತು ಬೆಂಗಳೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ : ಡ್ಯಾನ್ಸ್ ಮಾಡ್ತಿದ್ದಾಗಲೇ ಹಾರ್ಟ್ ಅಟ್ಯಾಕ್ – ವಿಜಯಪುರದಲ್ಲಿ 28 ವರ್ಷದ ಯುವಕನ ದುರಂತ ಅಂತ್ಯ!

Btv Kannada
Author: Btv Kannada

Read More