ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳಿಗೆ ಜೂ.19ಕ್ಕೆ ಉಪಚುನಾವಣೆ, 23ಕ್ಕೆ ಫಲಿತಾಂಶ!

ನವದೆಹಲಿ : ಗುಜರಾತ್, ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದ ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕಗಳನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜೂನ್ 19 ರಂದು 4 ರಾಜ್ಯಗಳ 5 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಧಿಕೃತ ಅಧಿಸೂಚನೆಯ ಪ್ರಕಾರ, ನಾಲ್ಕು ರಾಜ್ಯಗಳ ಉಪಚುನಾವಣೆಗೆ ಜೂನ್ 19 ರಂದು ಮತದಾನ ನಡೆಯಲಿದೆ.

ಗುಜರಾತ್‌ನ ಕಾಡಿ ಮತ್ತು ವಿಸಾವದರ್ ಕ್ಷೇತ್ರಗಳು, ಬಂಗಾಳದ ಕಾಳಿಗಂಜ್, ಪಂಜಾಬ್‌ನ ಲುಧಿಯಾನ ಪಶ್ಚಿಮ ಮತ್ತು ಕೇರಳದ ನಿಲಂಬೂರ್ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಜೂನ್ 23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಗುಜರಾತ್‌ನಲ್ಲಿ ಹಾಲಿ ಶಾಸಕ ಕರ್ಸನ್‌ಭಾಯ್ ಪಂಜಾಬಿ ಸೋಲಂಕಿ ನಿಧನದ ಬಳಿಕ ಕಾಡಿ ಕ್ಷೇತ್ರದ ಸ್ಥಾನ ತೆರವಾಗಿತ್ತು. ಅಲ್ಲದೇ ವಿಶಾವದರ್ ಕ್ಷೇತ್ರದಲ್ಲಿ ಭಯಾನಿ ಭೂಪೇಂದ್ರಭಾಯ್ ಗಂಡುಭಾಯ್ ಅವರ ರಾಜೀನಾಮೆಯಿಂದಾಗಿ ಆ ಕ್ಷೇತ್ರದ ಸ್ಥಾನ ತೆರವಾಗಿತ್ತು. ಕೇರಳದ ನಿಲಂಬೂರ್ ಕ್ಷೇತ್ರದಲ್ಲಿ ಪಿ.ವಿ ಅನ್ವರ್ ರಾಜೀನಾಮೆಯಿಂದ ಉಪಚುನಾವಣೆ ನಡೆಯಲಿದೆ. ಪಂಜಾಬ್‌ನ ಲುಧಿಯಾನ ಕ್ಷೇತ್ರದಲ್ಲಿ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದಿಂದಾಗಿ ಸ್ಥಾನ ತೆರವಾಗಿತ್ತು.

ಇನ್ನು ಪಶ್ಚಿಮ ಬಂಗಾಳದ ಕಾಳಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ನಾಸಿರುದ್ದೀನ್ ಅಹಮದ್ ಅವರ ನಿಧನದಿಂದ ಉಪಚುನಾವಣೆ ಅನಿವಾರ್ಯವಾಗಿದೆ. ಈ ಎಲ್ಲಾ ಕ್ಷೇತ್ರಗಳಲ್ಲೂ ಜೂ.19ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಬಸ್​​ ಪಲ್ಟಿ – 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

Btv Kannada
Author: Btv Kannada

Read More