ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈಗ ಮಲ್ಲೇಶ್ವರಂ, ರಾಜಾಜಿನಗರದ ಇಬ್ಬರಲ್ಲಿ ಮಹಾಮಾರಿ ಕೊರೋನಾ ಸೋಂಕು ಪತ್ತೆಯಾಗಿದೆ.
ಮಲ್ಲೇಶ್ವರಂನ 45 ವರ್ಷದ ವ್ಯಕ್ತಿಗೆ ಹಾಗೂ ರಾಜಾಜಿನಗರದ 38 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದೇ ಇವರಿಬ್ಬರಿಗೂ ಕೋವಿಡ್ ಕಾಣಿಸಿಕೊಂಡಿದ್ದು, ಇಬ್ಬರನ್ನು ಹೋಂ ಐಸೂಲೇಷನ್‌ನಲ್ಲಿ ಇರಿಸಲಾಗಿದೆ.
ಬೆಂಗಳೂರಿನಲ್ಲಿ ವೈಟ್‌ಫೀಲ್ಡ್‌ನ 84 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ. ವೃದ್ಧ ಉಸಿರಾಟದ ಸಮಸ್ಯೆ ಹಾಗೂ ಅಂಗಾಂಗ ವೈಫಲ್ಯ ಖಾಯಿಲೆಗಳಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಸಹ ಕೋವಿಡ್‌ಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಕೇಸ್ ಇವೆ. ಬೆಂಗಳೂರಿನಲ್ಲಿ 9 ತಿಂಗಳ ಮಗು ಸೇರಿ ಒಟ್ಟು ಮೂರು ಜನ ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಶನಿವಾರ ರಾಜ್ಯದಲ್ಲಿ 108 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ ಐವರಿಗೆ ಕೋವಿಡ್ ಬಂದಿದೆ. ಶನಿವಾರ ಬೆಂಗಳೂರಲ್ಲಿ 2, ಮೈಸೂರು 2 ಹಾಗೂ ವಿಜಯನಗರದಲ್ಲಿ ಒಂದು ಕೋವಿಡ್ ಕೇಸ್ ಪತ್ತೆಯಾಗಿತ್ತು.
ಇದನ್ನೂ ಓದಿ : ರಾಜ್ಯಾದ್ಯಂತ ಗಾಳಿ ಸಹಿತ ಭಾರೀ ಮಳೆ – ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!
