ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಜನರು ಪರದಾಡುವಂತಾಗಿದೆ. ಈ ಮಧ್ಯೆ ಕರಾವಳಿ, ಮಲೆನಾಡು ಹಾಗೂ ಬೆಂಗಳೂರಿನಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ಸದ್ಯ ಮುಂದಿನ ಮೂರು ಗಂಟೆಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಯಚೂರು, ಬಳ್ಳಾರಿ, ವಿಜಯನಗರ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪೂರ್ವ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ವರುಣ ಅಬ್ಬರ ಮುಂದುವರೆದಿದೆ. ಮೇ 27ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮಂಡ್ಯ, ಮತ್ತು ಮೈಸೂರು ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಾದ ಬೆಂಗಳೂರು ಸೇರಿದಂತೆ ಇತರೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : “ಕರಳೆ” ಚಿತ್ರದ ವಿವಾದಿತ ಪೋಸ್ಟರ್ ಬ್ಯಾನ್ – ಹೊಸ ಪೋಸ್ಟರ್ ರಿಲೀಸ್ಗೆ ಗ್ರೀನ್ ಸಿಗ್ನಲ್ ಕೊಟ್ಟ ಫಿಲ್ಮ್ ಚೇಂಬರ್!







