ರೇವ್ ಪಾರ್ಟಿ ಮೇಲೆ ದಾಳಿ – ಯುವಕ, ಯುವತಿಯರನ್ನು ವಶಕ್ಕೆ ಪಡೆದ ದೇವನಹಳ್ಳಿ ಪೊಲೀಸರು!

ಚಿಕ್ಕಬಳ್ಳಾಪುರ : ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಬಳಿಯ ಪಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕ, ಯುವತಿಯರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪಾರ್ಟಿಯಲ್ಲಿ 7 ಯುವತಿಯರು ಹಾಗೂ 24 ಯುವಕರು ಭಾಗಿಯಾಗಿರುವುದು ಗೊತ್ತಾಗಿದೆ. ಎಲ್ಲರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕ 4 ಜನರನ್ನು ಬಂಧಿಸಿದ್ದು, ಉಳಿದವರನ್ನು ಸ್ಟೇಷನ್‌ ಬೇಲ್‌ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಸಜೀತ್ ತಿಳಿಸಿದ್ದಾರೆ.

ಬೆಳಗ್ಗೆ 5:00 ಗಂಟೆ ಸುಮಾರಿಗೆ ಕನ್ನಮಂಗಲ ಫಾರ್ಮ್ ಹೌಸ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬರ್ತ್ ಡೇ ಪಾರ್ಟಿಯಲ್ಲಿ, ರಾತ್ರಿ ಇಡೀ ಮಾದಕ ವಸ್ತು ಬಳಕೆ ಮಾಡಿದ್ದಾರೆ ಎಂಬುದು ತಿಳಿದು ಬಂದಿತ್ತು. ಪಾರ್ಟಿಯಲ್ಲಿ ಪೆಡ್ಲರ್ ಕೂಡ ಇದ್ದ. ಆರೋಪಿಗಳು ಐಟಿ ಸೆಕ್ಟರ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಫಾರ್ಮ್‌ ಹೌಸ್‌ ಮಾಲೀಕ ಸೇರಿ ಎಲ್ಲಾ ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಸಾಮ್ರಾಟ್ ಆರ್. ಅಶೋಕ್ ಸತತ ಪ್ರಯತ್ನ – ಕೊನೆಗೂ 18 ಬಿಜೆಪಿ ಶಾಸಕರ ಅಮಾನತು ವಾಪಸ್‌!

Btv Kannada
Author: Btv Kannada

Read More