ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆ – ಆರೋಗ್ಯ ಇಲಾಖೆ ಫುಲ್ ಅಲರ್ಟ್​.. ಟೆಸ್ಟಿಂಗ್ ಹೆಚ್ಚಳ!

ಬೆಂಗಳೂರು : ದೇಶದಲ್ಲಿ ಮತ್ತೆ ಕೊರೊನಾ ರೂಪಾಂತರಿ ವೈರಸ್ ಭೀತಿ ಸೃಷ್ಟಿಸಿದೆ. ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದುವರೆಗೂ 47 ಕೊರೊನಾ ಸಕ್ರಿಯ ಪ್ರಕರಣಗಳು ದಾಖಲಾಗಿದೆ. ಇದ್ರಲ್ಲಿ 46 ಮಂದಿ ಹೋಮ್ ಐಸೋಲೇಶನಲ್ಲಿದ್ದು, ಓರ್ವ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ 104 ಮಂದಿಯನ್ನು ಟೆಸ್ಟ್‌ಗೆ ಒಳಪಡಿಸಿದೆ. ಕಳೆದ 24 ಗಂಟೆಯಲ್ಲಿ 9 ಹೊಸ ಪ್ರಕರಣ ದಾಖಲಾಗಿದೆ.

ಒಟ್ಟು‌ ರಾಜ್ಯದಲ್ಲಿ ಶೇಕಡ 8.65ರಷ್ಟು ಪಾಸಿಟಿವ್ ಕೇಸ್​ಗಳಿದ್ದು, SARI ಪ್ರಕರಣಗಳಿಗೆ ಕಡ್ಡಾಯ ಟೆಸ್ಟಿಂಗ್‌ಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ‌ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಟೆಸ್ಟಿಂಗ್ ಗೆ ಸಿದ್ಧತೆ ಮಾಡಕೊಳ್ಳಲಾಗಿದೆ. ದಿನಕ್ಕೆ 150-200 ಟೆಸ್ಟ್‌ ಮಾಡಲು ಆರೋಗ್ಯ ಇಲಾಖೆ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.

BBMP ಹೈವೋಲ್ಟೇಜ್ ಮೀಟಿಂಗ್ : ಬೆಂಗಳೂರು ನಗರದಲ್ಲಿ ಕೊರೊನಾ ಪಾಸಿಟಿವ್ ಕೇಸ್ ಏರಿಕೆಯಾಗುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಬಿಬಿಎಂಪಿಯಲ್ಲಿ ಇಂದು ಹೈವೋಲ್ಟೇಜ್ ಮೀಟಿಂಗ್ ಕರೆಯಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ನೇತೃತ್ವದಲ್ಲಿ ಇಂದು ಮಹಾನಗರ ಪಾಲಿಕೆಯ 8 ವಲಯಗಳ ವಿಶೇಷ ಆಯುಕ್ತರು, ಆರೋಗ್ಯ ಅಧಿಕಾರಿಗಳ ಜೊತೆ ಕೊವಿಡ್‌ಗೆ ಸಂಬಂಧಪಟ್ಟಂತೆ ಮಹತ್ವದ ಸಭೆ ನಡೆಸಲಾಗುತ್ತಿದೆ.

ಆರೋಗ್ಯ ಇಲಾಖೆ, ಸಂಬಂಧಪಟ್ಟ ವಾರಿಯರ್ಸ್‌ಗಳು ಕೊರೊನಾ ನಿಯಂತ್ರಿಸಲು ಸಜ್ಜಾಗುತ್ತಿದ್ದಾರೆ. ಬಹುಮುಖ್ಯವಾಗಿ ಗರ್ಭಿಣಿಯರು, ಮಕ್ಕಳು ಎಚ್ಚರ ವಹಿಸುವುದು ಒಳ್ಳೆಯದು ಎಂದು ಸಾಂಕ್ರಾಮಿಕ ರೋಗ ತಜ್ಞರು ಸಲಹೆ ನೀಡಿದ್ದಾರೆ.

ಇಂದಿನ ಹೈವೋಲ್ಟೇಜ್ ಸಭೆಯಲ್ಲಿ ವೈರಸ್ ತಡೆಗಟ್ಟಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಪಾಲಿಕೆಯ ಆಸ್ಪತ್ರೆಗೆ ಬರುವ ಗರ್ಭಿಣಿಯರ ಮೇಲೆ ಹೆಚ್ಚಿನ ನಿಗಾ ಇಡಬೇಕು. ಕೆಮ್ಮು, ನೆಗಡಿ, ಜ್ವರ ಕಂಡು ಬಂದ್ರೆ ತಕ್ಷಣ ಚಿಕಿತ್ಸೆಯ ವ್ಯವಸ್ಥೆ. ಟೆಸ್ಟಿಂಗ್, ಬೆಡ್ ಕಾದಿರಿಸುವಿಕೆ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಸೇರಿದಂತೆ ಸ್ಯಾರಿ ಕೇಸ್‌ಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡುವ ಸಾಧ್ಯತೆ ಇದೆ.

ಲಭ್ಯವಿರುವ ಟೆಸ್ಟಿಂಗ್ ಕಿಟ್ಸ್​​​ಗಳ ಮಾಹಿತಿ :

RAT = 2500
RNA extraction kits =130000
VTM= 200000
RTPCR kits = 5000 Procuring

ಇದನ್ನೂ ಓದಿ : IPL ಸೀಸನ್​ 18ಕ್ಕೆ ಗೆಲುವಿನ ವಿದಾಯ ಹೇಳಿದ SRH – ಕೊನೆ ಪಂದ್ಯದಲ್ಲಿ ಕೆಕೆಆರ್​ಗೆ ಹೀನಾಯ ಸೋಲು!

Btv Kannada
Author: Btv Kannada

Read More