ಮಂಡ್ಯ : ಮಂಡ್ಯ ಟ್ರಾಫಿಕ್ ಪೊಲೀಸರ ವಸೂಲಿ ದಂಧೆಗೆ ಮೂರು ವರ್ಷದ ಮಗು ಬಲಿಯಾಗಿರೋ ಮನಕಲಕುವ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಈ ಘಟನೆ ಮಂಡ್ಯ ಪೊಲೀಸರ ವ್ಯಾಪಕ ಭ್ರಷ್ಟಚಾರಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಸಾರ್ವಜನಿಕರು ಆಕ್ರೋಶ ಭುಗಿಲೆದ್ದಿದೆ.
ಮಂಡ್ಯ ಸಂಚಾರಿ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಹೃತೀಕ್ಷ ಎಂಬ ಕಂದಮ್ಮ ಮೃತಪಟ್ಟಿದೆ. ಮಗಳನ್ನು ಕಳೆದುಕೊಂಡ ದಂಪತಿ ಮದ್ದೂರು ತಾಲೂಕಿನ ಗೊರವನಹಳ್ಳಿಯ ನಿವಾಸಿಯಾಗಿದ್ದು, ಹೃತೀಕ್ಷಾಗೆ ನಾಯಿ ಕಚ್ಚಿದ್ದ ಹಿನ್ನೆಲೆ ದಂಪತಿ ಮಿಮ್ಸ್ ಆಸ್ಪತ್ರೆಗೆ ಮಗಳನ್ನು ಕರೆದುಕೊಂಡು ಹೋಗುತ್ತಿದ್ದರು.
ಆದ್ರೆ, ಈ ವೇಳೆ ಹೆಲ್ಮೆಟ್ ತಪಾಸಣೆಗೆಂದು ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಆಗ ಬೈಕ್ನಲ್ಲಿದ್ದ ತಂದೆ, ತಾಯಿ ಹಾಗೂ ಮಗು ಆಯಾ ತಪ್ಪಿ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಪರಿಣಾಮ ಹೃತೀಕ್ಷಾ ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಜೀವಬಿಟ್ಟಿದೆ.
ಇನ್ನೂ, ಮುದ್ದಾದ ಮಗುವನ್ನು ಕಳೆದುಕೊಂಡು ಪೋಷಕರು, ಕುಟುಂಬಸ್ಥರು ಮಿಮ್ಸ್ ಆಸ್ಪತ್ರೆ ಎದುರು ರಸ್ತೆಯಲ್ಲೇ ಶವವಿಟ್ಟು ಅಳುತ್ತಿದ್ದಾರೆ. ಮಂಡ್ಯ ಪೊಲೀಸರ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಂಡ್ಯ ಪೊಲೀಸರ ಕರ್ಮಕಾಂಡಕ್ಕೆ ಸಾರ್ವಜಕನಿಕರು ಘಟನಾ ಸ್ಥಳದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಹೆಲ್ಮೆಟ್ಗಾಗಿ ತಪಸಾಣೆ ವೇಳೆ ಮಗು ಸಾವಿಗೆ ಪೊಲೀಸರೇ ಕಾರಣ, ಪೊಲೀಸರ ವಿರುದ್ಧ ದೂರು ಕೊಟ್ಟರು ಕ್ರಮ ಕೈಗೊಂಡಿಲ್ಲ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.
ಇದನ್ನೂ ಓದಿ : ತುಂಬಿ ಹರಿದ ಕುಮಾರಧಾರ – ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ.. ಭಕ್ತರಿಗೆ ಮಹತ್ವದ ಸೂಚನೆ!
