ಭೋವಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ ಕೇಸ್ – ED ಯಿಂದ 26.27 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು!

ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇದೀಗ ಈ ಪ್ರಕರಣದ ಆರೋಪಿಗಳಿಗೆ ಸೇರಿದ 26.27 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ.

ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಬಿ. ಕೆ ನಾಗರಾಜಪ್ಪ, ಆರ್ ಲೀಲಾವತಿ ಮತ್ತು ಇತರ ಆರೋಪಿಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿದೆ. ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿರುವ ಸ್ಥಿರಾಸ್ತಿ ಪ್ರಸ್ತುತ ಮಾರುಕಟ್ಟೆ ದರದಲ್ಲಿ 40 ಕೋಟಿ ಮೌಲ್ಯದ ಆಸ್ತಿಯಾಗಿದೆ. ಸದ್ಯ ED ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿದೆ.

ಏನಿದು ಹಗರಣ?

2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂ. ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿತ್ತು. ಬಳಿಕ ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ : ಪ್ರಭಾವಿ ಮಂತ್ರಿ, ಅಳಿಯನಿಂದ 25 ಕೋಟಿ ಟೆಂಡರ್​​​​​​​​​​​​​​ ಗೋಲ್​​ಮಾಲ್ – FIR ದಾಖಲು.. ಇಬ್ಬರು ಅರೆಸ್ಟ್​​ ಆಗೋದು ಫಿಕ್ಸ್​​?

Btv Kannada
Author: Btv Kannada

Read More