ಬೆಂಗಳೂರು : ಕನ್ನಡಿಗ, ಹಿರಿಯ IPS ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯ ಸರ್ಕಾರವು ಪ್ರಭಾರ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಕ ಮಾಡಿದ್ದು, ಈ ಬೆನ್ನಲ್ಲೇ ಇದೀಗ DG-IGP ಎಂ.ಎ. ಸಲೀಂ ಅವರಿಗೆ ಸಂಕಷ್ಟ ಎದುರಾಗಿದೆ.
ಡಾ. ಎಂ.ಎ ಸಲೀಂ ಅವರನ್ನು ರಾಜ್ಯದ ಪೊಲೀಸ್ ಮಹಾನಿರ್ದೇಶಕರನ್ನಾಗಿ ಸರ್ಕಾರ ನೇಮಕ ಮಾಡಿದ್ದು, ಇದನ್ನು ಪ್ರಶ್ನಿಸಿ ವಕೀಲೆ ಸುಧಾ ಕಟ್ವಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಸುಪ್ರೀಂ ಕೋರ್ಟ್ನ ಆದೇಶದಂತೆ ಪ್ರಭಾರ ಡಿಜಿ-ಐಜಿಪಿ ನೇಮಿಸುವಂತಿಲ್ಲ. ಯಾವುದೇ ವಿಶೇಷ ಕಾರಣ ನೀಡದೆ, ಅವಧಿ ಉಲ್ಲೇಖಿಸದೆ ಡಿಜಿ-ಐಜಿಪಿ ನೇಮಕ ಮಾಡಲಾಗಿದೆ. ಈ ಮೂಲಕ ಸಂವಿಧಾನ ಮತ್ತು ಕಾನೂನು ಉಲ್ಲಂಘಿಸಲಾಗಿದೆ. ಹೀಗಾಗಿ. ಡಾ. ಎಂ.ಎ.ಸಲೀಂ ಅವರ ನೇಮಕಾತಿ ಹಿಂಪಡೆಯಬೇಕು. ಸುಪ್ರೀಂಕೋರ್ಟ್ ಮಾರ್ಗಸೂಚಿಯಂತೆ ನೇಮಕ ಮಾಡಲಿ. ಏಳು ದಿನಗಳಲ್ಲಿ ನಿಯಮ ಪಾಲಿಸದಿದ್ದರೆ ಪಿಐಎಲ್ ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಭೇಟಿಯಾದ ವೈನ್ ಮರ್ಚೆಂಟ್ಸ್ ನಿಯೋಗ – ಹಲವು ಬೇಡಿಕೆಗಳ ಬಗ್ಗೆ ಸಿಎಂಗೆ ಮನವಿ!
