ಮಂಗಳೂರು : ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕರಾವಳಿ ಭಾಗದ ಜನಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಮೇ 28ರವರೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ವರುಣನ ಅಬ್ಬರ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಇಂದು ಮತ್ತು ನಾಳೆ (ಮೇ 28)ರಂದು ಅಂಗನವಾಡಿ ಸೇರಿದಂತೆ ದ್ವಿತೀಯ ಪಿಯುಸಿವರೆಗಿನ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಮೇ 28ರ ಬಳಿಕ ವಾತಾವರಣ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಮುನ್ನೆಚ್ಚರಿಕೆ ಕ್ರಮಗಳೇನು?
- ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಮುಂಜಾಗ್ರತೆ ವಹಿಸಲು ತಿಳಿಸಲಾಗಿದೆ.
- ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
- ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರ ತೀರಕ್ಕೆ, ಚಾರಣಕ್ಕೆ ತೆರಳಬಾರದು.
- ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ದೂರವಾಣಿಯನ್ನು ಸಂಪರ್ಕಿಸಬೇಕು.ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ – 1077, 0824 2442590
ಇದನ್ನೂ ಓದಿ : “ಠಾಣೆ” ಚಿತ್ರದ ಟ್ರೇಲರ್ ಅನಾವರಣಗೊಳಿಸಿದ ಮಾಲತಿ ಸುಧೀರ್ – ಮೇ.30ಕ್ಕೆ ಸಿನಿಮಾ ತೆರೆಗೆ!

Author: Btv Kannada
Post Views: 196