S.T ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ಗೆ ಬಿಗ್​ ಶಾಕ್ – ಬಿಜೆಪಿಯಿಂದ 6 ವರ್ಷ ಉಚ್ಚಾಟನೆ!

ದೆಹಲಿ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರ ವಿರುದ್ಧ ಬಿಜೆಪಿ ಶಿಸ್ತು ಸಮಿತಿ ಕ್ರಮ ತೆಗೆದುಕೊಂಡಿದ್ದು, ಇಬ್ಬರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಕಳೆದ 2 ತಿಂಗಳ ಹಿಂದೆಷ್ಟೇ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಪಕ್ಷಕ್ಕೆ ಮುಜುಗರ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ನಡೆಸಲಾಗುತ್ತಿತ್ತು. ಇದರ ನಡುವೆ ಶಾಸಕ ಎಸ್​,ಟಿ ಸೋಮಶೇಖರ್​ ಮತ್ತು ಶಿವರಾಂ ಹೆಬ್ಬಾರ್​ರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಕ್ಕೆ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

ಇದನ್ನೂ ಓದಿ : ಅವೈಜ್ಞಾನಿಕವಾಗಿ ವಾಹನ ಸವಾರರನ್ನು ತಡೆಯಬೇಡಿ – ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಖಡಕ್ ಎಚ್ಚರಿಕೆ!

Btv Kannada
Author: Btv Kannada

Read More