ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, 47 ಇದ್ದ ಕೊರೋನಾ ಕೇಸ್ ಇದೀಗ ಕರ್ನಾಟಕದಲ್ಲಿ 80ಕ್ಕೆ ಏರಿಕೆ ಆಗಿವೆ. ಕಳೆದ 24 ಗಂಟೆಯಲ್ಲಿ ಮತ್ತೆ 37 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಇದರೊಂದಿಗೆ ಇದೀಗ ಸೋಂಕಿತರ ಸಂಖ್ಯೆ 80ಕ್ಕೆ ಹೆಚ್ಚಳವಾಗಿದೆ.
ಕೋವಿಡ್ ಆತಂಕದ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಇಂದಿನಿಂದ ಕೊರೋನಾ ಟೆಸ್ಟಿಂಗ್ ಆರಂಭ ಮಾಡಲಾಗಿದೆ. ಹಾಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೆ ಸಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಆಸ್ಪತ್ರೆಯ ಆಕ್ಸಿಜನ್ ಮತ್ತು ಬೆಡ್ ಸೌಲಭ್ಯಗಳನ್ನು ಪರಿಶೀಲನೆ ಮಾಡಿದ್ದಾರೆ.
ಇನ್ನು ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಶಾಲಾ ಶಿಕ್ಷಕರು, ಪೋಷಕಕರು ಹಾಗೂ ವಿದ್ಯಾರ್ಥಿಗಳಿಗೆ ಮಹತ್ವದ ಸಂದೇಶವನ್ನು ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದಾರೆ. ಸೋಂಕಿನ ಲಕ್ಷಣಗಳು ಇದ್ದರೆ ಶಾಲೆಗೆ ಕಳುಹಿಸುವುದು ಬೇಡ ಎಂದು ಪೋಷಕರಿಗೆ ತಿಳಿಸಿದ್ದು, ಒಂದು ವೇಳೆ ಅಂತಹ ಮಕ್ಕಳು ಶಾಲೆಗೆ ಬಂದಿದ್ದರೆ ವಾಪಸ್ ಕಳಿಸುವಂತೆ ಶಾಲಾ ಶಿಕ್ಷಕರಿಗೆ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಇದನ್ನೂ ಓದಿ : ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಕನ್ನಡದ ಹಿರಿಯ ನಟ ಅನಂತ್ ನಾಗ್!
